ಭಾರತ ಮತ್ತು ಪಾಕಿಸ್ತಾನ್ ನಡುವಣ ಯುದ್ಧ ಭೀತಿಯಿಂದಾಗಿ ಸ್ಥಗಿತಗೊಂಡಿದ್ದ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18 ಇಂದಿನಿಂದ ಮತ್ತೆ ಶುರುವಾಗಲಿದೆ. ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೊಲ್ಕತ್ತಾ ನೈಟ್ ರೈಡರ್ಸ್ (KKR) ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಗಳು ಮುಖಾಮುಖಿಯಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಗಳ ಮೂಲಕ ಉಭಯ ತಂಡಗಳ ಪ್ಲೇಆಫ್ ಭವಿಷ್ಯ ನಿರ್ಧಾರವಾಗಲಿದೆ.




