ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಭುವನೇಶ್ವರ: ಸಿಡಿಲು ಬಡಿದು 9 ಜನ ಸಾವು ; ಹಲವರಿಗೆ ಗಾಯ

ಒಡಿಶಾದಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಿದ್ದು, ಸಿಡಿಲು ಬಡಿದು ಅರು ಮಹಿಳೆಯರು ಸೇರಿ ಒಂಬತ್ತು ಮಂದಿ ಮೃತಪಟ್ಟಿದ್ದು. ಕೆಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಡರಾತ್ರಿ ಭಾರಿ ಮಳೆಯಾಗಿದ್ದು, ಕೊರಾಪುಟ್ ಜಿಲ್ಲೆಯಲ್ಲಿ ಮೂವರು, ಜಾಜ್‌ ಪುರ ಮತ್ತು ಗಂಜಾಂ ಜಿಲ್ಲೆಗಳಲ್ಲಿ ತಲಾ ಇಬ್ಬರು ಧೆಂಕನಲ್ ಮತ್ತು ಗಜಪತಿ ಜಿಲ್ಲೆಗಳಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸಿಡಿಲು ಬಡಿದು ಒಂದೇ ಕುಟುಂಬದ ಮೂವರು ಮಹಿಳೆಯರು ಮೃತಪಟ್ಟಿದ್ದಾರೆ. ಜಾಜ್ಪುರ ಜಿಲ್ಲೆಯಲ್ಲಿ, ಧರ್ಮಸಾಲಾ ಪ್ರದೇಶದಲ್ಲಿ ಸಿಡಿಲು ಬಡಿದು ಇಬ್ಬರು ಬಾಲಕರು ಮೃತಪಟ್ಟಿದ್ದಾರೆ. ಗಂಜಾಂ ಜಿಲ್ಲೆಯ ಕಬಿಸೂರ್ಯನಗರದಲ್ಲಿ ಸಿಡಿಲು ಬಡಿದು 7ನೇ ತರಗತಿ ವಿದ್ಯಾರ್ಥಿಯೊಬ್ಬರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಬೆಳಗುಂತ ಪ್ರದೇಶದಲ್ಲಿ ಮಾವಿನ ಹಣ್ಣುಗಳನ್ನು ಸಂಗ್ರಹಿಸುತ್ತಿದ್ದ ಮಹಿಳೆಯೊಬ್ಬರಿಗೆ ಸಿಡಿಲು ಬಡಿದು ಮೃತಪಟ್ಟರೆ, ಧೆಂಕನಲ್‌ನ ಕುಸುಮುಂಡಿಯಾ ಗ್ರಾಮದಲ್ಲಿ ಸಿಡಿಲು ಬಡಿದು ಮತ್ತೋರ್ವ ಮಹಿಳೆ ಸಾವಿಗೀಡಾಗಿದ್ದಾರೆ. ಗಜಪತಿ ಜಿಲ್ಲೆಯಲ್ಲಿ ಇಟ್ಟಿಗೆಗಳನ್ನು ಸಾಗಿಸುತ್ತಿದ್ದ ವೇಳೆ ಸಿಡಿಲು ಬಡಿದು ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.

ಈ ಸಂಬಂಧ ಅಸಹಜ ಸಾವು ಪ್ರಕರಣದಡಿ ದೂರು ದಾಖಲಿಸಿಕೊಂಡು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಕೊರಾಪುಟ್, ಕಟಕ್, ಖುರ್ದಾ, ನಯಾಗಢ, ಜಾಜ್‌ ಪುರ, ಬಾಲಸೋರ್ ಮತ್ತು ಗಂಜಾಂ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಶುಕ್ರವಾರ ಭಾರಿ ಮಳೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!