ಒಡಿಶಾದಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಿದ್ದು, ಸಿಡಿಲು ಬಡಿದು ಅರು ಮಹಿಳೆಯರು ಸೇರಿ ಒಂಬತ್ತು ಮಂದಿ ಮೃತಪಟ್ಟಿದ್ದು. ಕೆಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತಡರಾತ್ರಿ ಭಾರಿ ಮಳೆಯಾಗಿದ್ದು, ಕೊರಾಪುಟ್ ಜಿಲ್ಲೆಯಲ್ಲಿ ಮೂವರು, ಜಾಜ್ ಪುರ ಮತ್ತು ಗಂಜಾಂ ಜಿಲ್ಲೆಗಳಲ್ಲಿ ತಲಾ ಇಬ್ಬರು ಧೆಂಕನಲ್ ಮತ್ತು ಗಜಪತಿ ಜಿಲ್ಲೆಗಳಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸಿಡಿಲು ಬಡಿದು ಒಂದೇ ಕುಟುಂಬದ ಮೂವರು ಮಹಿಳೆಯರು ಮೃತಪಟ್ಟಿದ್ದಾರೆ. ಜಾಜ್ಪುರ ಜಿಲ್ಲೆಯಲ್ಲಿ, ಧರ್ಮಸಾಲಾ ಪ್ರದೇಶದಲ್ಲಿ ಸಿಡಿಲು ಬಡಿದು ಇಬ್ಬರು ಬಾಲಕರು ಮೃತಪಟ್ಟಿದ್ದಾರೆ. ಗಂಜಾಂ ಜಿಲ್ಲೆಯ ಕಬಿಸೂರ್ಯನಗರದಲ್ಲಿ ಸಿಡಿಲು ಬಡಿದು 7ನೇ ತರಗತಿ ವಿದ್ಯಾರ್ಥಿಯೊಬ್ಬರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಬೆಳಗುಂತ ಪ್ರದೇಶದಲ್ಲಿ ಮಾವಿನ ಹಣ್ಣುಗಳನ್ನು ಸಂಗ್ರಹಿಸುತ್ತಿದ್ದ ಮಹಿಳೆಯೊಬ್ಬರಿಗೆ ಸಿಡಿಲು ಬಡಿದು ಮೃತಪಟ್ಟರೆ, ಧೆಂಕನಲ್‌ನ ಕುಸುಮುಂಡಿಯಾ ಗ್ರಾಮದಲ್ಲಿ ಸಿಡಿಲು ಬಡಿದು ಮತ್ತೋರ್ವ ಮಹಿಳೆ ಸಾವಿಗೀಡಾಗಿದ್ದಾರೆ. ಗಜಪತಿ ಜಿಲ್ಲೆಯಲ್ಲಿ ಇಟ್ಟಿಗೆಗಳನ್ನು ಸಾಗಿಸುತ್ತಿದ್ದ ವೇಳೆ ಸಿಡಿಲು ಬಡಿದು ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.
ಈ ಸಂಬಂಧ ಅಸಹಜ ಸಾವು ಪ್ರಕರಣದಡಿ ದೂರು ದಾಖಲಿಸಿಕೊಂಡು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಕೊರಾಪುಟ್, ಕಟಕ್, ಖುರ್ದಾ, ನಯಾಗಢ, ಜಾಜ್ ಪುರ, ಬಾಲಸೋರ್ ಮತ್ತು ಗಂಜಾಂ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಶುಕ್ರವಾರ ಭಾರಿ ಮಳೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…