ರಾಜ್ಯ ಸರ್ಕಾರ ನಾಲ್ಕನೇ ಬಾರಿ ಬಿಯರ್ ದರ ಏರಿಕೆ ಮಾಡುತ್ತಿದೆ. ಐಎಂಎಲ್ ದರವನ್ನು ಎರಡು ಬಾರಿ ಏರಿಕೆ ಮಾಡಿದೆ. ಈ ಬಗ್ಗೆ ಕಾನೂನು ಹೋರಾಟಕ್ಕೂ ಅವಕಾಶ ಇಲ್ಲ. ನಮ್ಮ ಬೇಡಿಕೆಯನ್ನು ಮುಖ್ಯಮಂತ್ರಿಗಳಿಗೆ ತಿಳಿಸಿದ್ದೇವೆ.
ಆದರೆ ನಮ್ಮ ಯಾವ ಬೇಡಿಕೆಯನ್ನೂ ಈಡೇರಿಸಿಲ್ಲ ಎಂದು ವೈನ್ ಮಚೆರ್ಂಟ್ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ಗೋವಿಂದರಾಜ್ ಹೆಗ್ಡೆ ಅಸಮಾಧಾನ ಹೊರಹಾಕಿದ್ದಾರೆ. ಮುಖ್ಯಮಂತ್ರಿಗಳು ಮೇ21ಕ್ಕೆ ಸಭೆ ಕರೆದಿದ್ದಾರೆ. ಮತ್ತೊಮ್ಮೆ ಅವರಲ್ಲಿ ಮನವಿ ಮಾಡುತ್ತೇವೆ. ಸರಕಾರ ಆದಾಯದ ದೃಷ್ಟಿಯಿಂದ ಈ ರೀತಿ ಮಾಡುತ್ತಿದೆ. ಚೀಪರ್ ಮದ್ಯ ಹಾಗೂ ಬಿಯರ್‍ನ ಮೇಲೆ ದರ ಏರಿಕೆ ಮಾಡಲಾಗಿದೆ. ಸರ್ಕಾರದ ನೋಟಿಫಿಕೇಶನ್‍ಗೆ ನಾವು ಆಕ್ಷೇಪ ಹಾಕಿದ್ದೆವು. 2012ರಿಂದ 6 ಬಾರಿ ಈ ಸ್ಲಾಬ್ ಗಳಿಗೆ ದರ ಏರಿಕೆ ಮಾಡಿದ್ದಾರೆ. ಚೀಪರ್ ಸ್ಲಾಬ್ ಬಳಸುವವರು ಕೂಲಿ ಕಾರ್ಮಿಕರು. ಯಾವ ಸ್ಲಾಬ್‍ನಲ್ಲಿ ಸೇಲ್ಸ್ ಜಾಸ್ತಿ ಇದೆಯೋ ಆ ದರವನ್ನೇ ಏರಿಸುತ್ತಿದ್ದಾರೆ. ಇನ್ನು ಅಬಕಾರಿ ಶುಲ್ಕವನ್ನೂ ಜಾಸ್ತಿ ಮಾಡುತ್ತಿದ್ದಾರೆ. ಈ ರೀತಿ ಮಾಡುವುದು ಸರಿಯಲ್ಲ, ಇದಕ್ಕೆ ನಮ್ಮ ವಿರೋಧ ಇದೆ
ಎಂದು ಅವರು ಹೇಳಿದ್ದಾರೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…