ಜನ ಮನದ ನಾಡಿ ಮಿಡಿತ

Advertisement

ಮಂಗಳೂರು : ಧರ್ಮಸ್ಥಳದ ಯುವತಿ ಪಂಜಾಬ್ ನಲ್ಲಿ ಸಾವು; ಸಾವಿನ ಸುತ್ತ ಅನುಮಾನದ ಹುತ್ತ..!

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಮೂಲದ ಯುವತಿ ಪಂಜಾಬ್​ನಲ್ಲಿ ನಿಗೂಢವಾಗಿ ಸಾವನ್ನಪ್ಪಿರುವಂತಹ ಘಟನೆ ಮೇ. 17 ರಂದು ಸಂಜೆ ನಡೆದಿದೆ. ಏರೋಸ್ಪೇಸ್​​ನ ಉದ್ಯೋಗಿ ಆಕಾಂಕ್ಷಾ ಎಸ್. ನಾಯರ್(22) ಮೃತ ಯುವತಿ. 3ನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ಮಗಳ ಸಾವಿನ ವಿಷಯ ತಿಳಿಯುತ್ತಿದ್ದಂತೆ ಮೃತ ಆಕಾಂಕ್ಷಾ ಪೋಷಕರಾದ ಸುರೇಂದ್ರ ಮತ್ತು ಸಿಂಧೂದೇವಿ ನಿನ್ನೆಯೇ ಪಂಜಾಬ್​ಗೆ ತೆರಳಿದ್ದಾರೆ. ಜಲಂಧರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಂಜಾಬ್​ನ ಎಲ್​​.ಸಿ.ಯು ಪಗ್ವಾಡ ಕಾಲೇಜಿನಲ್ಲಿ ಓದಿದ್ದ ಆಕಾಂಕ್ಷಾ, 6 ತಿಂಗಳಿಂದ ದೆಹಲಿಯಲ್ಲಿ ಏರೋಸ್ಪೇಸ್ ಇಂಜಿನಿಯರ್​​ ಆಗಿ ಕೆಲಸ ಮಾಡುತ್ತಿದ್ದರು. ಉದ್ಯೋಗಕ್ಕೆ ಜಪಾನ್​ಗೆ ಹೋಗಲು ಪ್ಲ್ಯಾನ್ ಕೂಡ ನಡೆಸಿದ್ದರು. ಇದಕ್ಕಾಗಿ ನಿನ್ನೆ ಕಾಲೇಜಿಗೆ ತೆರಳಿ ಸರ್ಟಿಫಿಕೇಟ್ ಪಡೆದುಕೊಂಡು ಬಂದಿದ್ದರು. ಈ ವಿಚಾರವನ್ನು ಫೋನ್​ ಮಾಡಿ ಆಕಾಂಕ್ಷಾ ತನ್ನ ಪೋಷಕರಿಗೂ ತಿಳಿಸಿದ್ದಾಳೆ.

ಇನ್ನು ಪಂಜಾಬ್​ಗೆ ತೆರಳುತ್ತಿದ್ದಾಗ ಮೃತ ಆಕಾಂಕ್ಷಾ ಪೋಷಕರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಭೇಟಿಯಾದ ಶಾಸಕ ಹರೀಶ್ ಪೂಂಜಾ ಸಾಂತ್ವನ ಹೇಳಿದ್ದಾರೆ. ಈ ವೇಳೆ ‘ನಮ್ಮ ಮಗಳು ಆತ್ಮಹತ್ಯೆ ಮಾಡಿಕೊಳ್ಳಲು ಸಾಧ್ಯವಿಲ್ಲ. ಇದು ಕೊಲೆ ಆಗಿರಬಹುದು’ ಎಂದು ಆಕಾಂಕ್ಷಾ ಪೋಷಕರು ಅನುಮಾನ ವ್ಯಕ್ತಪಡಿಸಿದ್ದಾರೆ. ಜೊತೆಗೆ ಸೂಕ್ತ ತನಿಖೆಗೆ ಒತ್ತಾಯಿಸಿದ್ದಾರೆ ಎನ್ನಲಾಗಿದೆ.

ಜರ್ಮನ್​ಗೆ ಹೋಗಿ ಎರಡು ವರ್ಷ ಕೋರ್ಸ್ ಮಾಡುವ ಆಸೆ ಇತ್ತು. ಅದಕ್ಕಾಗಿ ಸರ್ಟಿಫಿಕೇಟ್ ಒಂದು ಸಿಕ್ಕಿರಲಿಲ್ಲ. ಕಾಲೇಜಿನಲ್ಲಿ ಕೇಳಿದ್ದಕ್ಕೆ, ಕಳಿಸಲು ಆಗಲ್ಲ ಇಲ್ಲಿಗೆ ಬನ್ನಿ ಅಂತಾ ಹೇಳಿದ್ದರಂತೆ. ನಿನ್ನೆ ಪಂಜಾಬ್​ಗೆ ಹೋಗಿ ಸ್ನೇಹಿತೆಯರ ರೂಮ್​​ನಲ್ಲಿ ಉಳಿದುಕೊಂಡಿದ್ದಾಳೆ ಎಂದಿದ್ದಾರೆ.

ಮಾಧ್ಯಮದೊಂದಿಗೆ ಮಾತನಾಡಿದ ಮೃತಳ ತಂದೆ, ಓರ್ವ ಸ್ನೇಹಿತ ಆಕೆಯನ್ನು ಕಾಲೇಜಿಗೆ ಡ್ರಾಪ್ ಮಾಡಿದ್ದಾನೆ. ಬೆಳಗ್ಗೆ 9.30ಕ್ಕೆ ಕಾಲೇಜಿಗೆ ಹೋಗಿದ್ದಾಳೆ. 11.30 ಕಾಲೇಜಿನಲ್ಲೇ ಇದ್ದೇನೆ ಅಂತಾ ಮೆಸೇಜ್ ಮಾಡಿದ್ದಾಳೆ. ಮಧ್ಯಾಹ್ನ ಕರೆ ಮಾಡಿದರೆ ರಿಸೀವ್ ಮಾಡಲಿಲ್ಲ. ಸಂಜೆ ಜಲಂದರ್ ಪೊಲೀಸ್ ಠಾಣೆಯಿಂದ ಕರೆ ಮಾಡಿ ನಿಮ್ಮ ಮಗಳು ಕಾಲೇಜಿನ ನಾಲ್ಕನೇ ಮಹಡಿಯಿಂದ ಬಿದ್ದಿದ್ದಾಳೆ ಎಂದರು. ಹೆಚ್ಚಿನ ಮಾಹಿತಿ ನೀಡುತ್ತಿಲ್ಲ. ಕೇಳಿದರೆ ನೀವು ಬನ್ನಿ ಎಂದು ಹೇಳುತ್ತಿದ್ದಾರೆ. ಸರ್ಟಿಫಿಕೇಟ್ ವಿಚಾರದಲ್ಲಿ ಕಾಲೇಜಿನವರಿಂದ ಏನೋ ತೊಂದರೆ ಆಗಿದೆ ಎನ್ನುವ ಅನುಮಾನವಿದೆ. ಈಗ ದೆಹಲಿ ಏರ್‌ಪೋರ್ಟ್​ನಲ್ಲಿದ್ದೇವೆ. ಮಧ್ಯಾಹ್ನ 2.30ಕ್ಕೆ ಅಮೃತಸರ ವಿಮಾನವಿದೆ. ಸಂಜೆ ವೇಳೆಗೆ ಅಲ್ಲಿ ತಲುಪುತ್ತೇವೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!