ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಮೂಲದ ಯುವತಿ ಪಂಜಾಬ್ನಲ್ಲಿ ನಿಗೂಢವಾಗಿ ಸಾವನ್ನಪ್ಪಿರುವಂತಹ ಘಟನೆ ಮೇ. 17 ರಂದು ಸಂಜೆ ನಡೆದಿದೆ. ಏರೋಸ್ಪೇಸ್ನ ಉದ್ಯೋಗಿ ಆಕಾಂಕ್ಷಾ ಎಸ್. ನಾಯರ್(22) ಮೃತ ಯುವತಿ. 3ನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ಮಗಳ ಸಾವಿನ ವಿಷಯ ತಿಳಿಯುತ್ತಿದ್ದಂತೆ ಮೃತ ಆಕಾಂಕ್ಷಾ ಪೋಷಕರಾದ ಸುರೇಂದ್ರ ಮತ್ತು ಸಿಂಧೂದೇವಿ ನಿನ್ನೆಯೇ ಪಂಜಾಬ್ಗೆ ತೆರಳಿದ್ದಾರೆ. ಜಲಂಧರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಂಜಾಬ್ನ ಎಲ್.ಸಿ.ಯು ಪಗ್ವಾಡ ಕಾಲೇಜಿನಲ್ಲಿ ಓದಿದ್ದ ಆಕಾಂಕ್ಷಾ, 6 ತಿಂಗಳಿಂದ ದೆಹಲಿಯಲ್ಲಿ ಏರೋಸ್ಪೇಸ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಉದ್ಯೋಗಕ್ಕೆ ಜಪಾನ್ಗೆ ಹೋಗಲು ಪ್ಲ್ಯಾನ್ ಕೂಡ ನಡೆಸಿದ್ದರು. ಇದಕ್ಕಾಗಿ ನಿನ್ನೆ ಕಾಲೇಜಿಗೆ ತೆರಳಿ ಸರ್ಟಿಫಿಕೇಟ್ ಪಡೆದುಕೊಂಡು ಬಂದಿದ್ದರು. ಈ ವಿಚಾರವನ್ನು ಫೋನ್ ಮಾಡಿ ಆಕಾಂಕ್ಷಾ ತನ್ನ ಪೋಷಕರಿಗೂ ತಿಳಿಸಿದ್ದಾಳೆ.
ಇನ್ನು ಪಂಜಾಬ್ಗೆ ತೆರಳುತ್ತಿದ್ದಾಗ ಮೃತ ಆಕಾಂಕ್ಷಾ ಪೋಷಕರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಭೇಟಿಯಾದ ಶಾಸಕ ಹರೀಶ್ ಪೂಂಜಾ ಸಾಂತ್ವನ ಹೇಳಿದ್ದಾರೆ. ಈ ವೇಳೆ ‘ನಮ್ಮ ಮಗಳು ಆತ್ಮಹತ್ಯೆ ಮಾಡಿಕೊಳ್ಳಲು ಸಾಧ್ಯವಿಲ್ಲ. ಇದು ಕೊಲೆ ಆಗಿರಬಹುದು’ ಎಂದು ಆಕಾಂಕ್ಷಾ ಪೋಷಕರು ಅನುಮಾನ ವ್ಯಕ್ತಪಡಿಸಿದ್ದಾರೆ. ಜೊತೆಗೆ ಸೂಕ್ತ ತನಿಖೆಗೆ ಒತ್ತಾಯಿಸಿದ್ದಾರೆ ಎನ್ನಲಾಗಿದೆ.
ಜರ್ಮನ್ಗೆ ಹೋಗಿ ಎರಡು ವರ್ಷ ಕೋರ್ಸ್ ಮಾಡುವ ಆಸೆ ಇತ್ತು. ಅದಕ್ಕಾಗಿ ಸರ್ಟಿಫಿಕೇಟ್ ಒಂದು ಸಿಕ್ಕಿರಲಿಲ್ಲ. ಕಾಲೇಜಿನಲ್ಲಿ ಕೇಳಿದ್ದಕ್ಕೆ, ಕಳಿಸಲು ಆಗಲ್ಲ ಇಲ್ಲಿಗೆ ಬನ್ನಿ ಅಂತಾ ಹೇಳಿದ್ದರಂತೆ. ನಿನ್ನೆ ಪಂಜಾಬ್ಗೆ ಹೋಗಿ ಸ್ನೇಹಿತೆಯರ ರೂಮ್ನಲ್ಲಿ ಉಳಿದುಕೊಂಡಿದ್ದಾಳೆ ಎಂದಿದ್ದಾರೆ.
ಮಾಧ್ಯಮದೊಂದಿಗೆ ಮಾತನಾಡಿದ ಮೃತಳ ತಂದೆ, ಓರ್ವ ಸ್ನೇಹಿತ ಆಕೆಯನ್ನು ಕಾಲೇಜಿಗೆ ಡ್ರಾಪ್ ಮಾಡಿದ್ದಾನೆ. ಬೆಳಗ್ಗೆ 9.30ಕ್ಕೆ ಕಾಲೇಜಿಗೆ ಹೋಗಿದ್ದಾಳೆ. 11.30 ಕಾಲೇಜಿನಲ್ಲೇ ಇದ್ದೇನೆ ಅಂತಾ ಮೆಸೇಜ್ ಮಾಡಿದ್ದಾಳೆ. ಮಧ್ಯಾಹ್ನ ಕರೆ ಮಾಡಿದರೆ ರಿಸೀವ್ ಮಾಡಲಿಲ್ಲ. ಸಂಜೆ ಜಲಂದರ್ ಪೊಲೀಸ್ ಠಾಣೆಯಿಂದ ಕರೆ ಮಾಡಿ ನಿಮ್ಮ ಮಗಳು ಕಾಲೇಜಿನ ನಾಲ್ಕನೇ ಮಹಡಿಯಿಂದ ಬಿದ್ದಿದ್ದಾಳೆ ಎಂದರು. ಹೆಚ್ಚಿನ ಮಾಹಿತಿ ನೀಡುತ್ತಿಲ್ಲ. ಕೇಳಿದರೆ ನೀವು ಬನ್ನಿ ಎಂದು ಹೇಳುತ್ತಿದ್ದಾರೆ. ಸರ್ಟಿಫಿಕೇಟ್ ವಿಚಾರದಲ್ಲಿ ಕಾಲೇಜಿನವರಿಂದ ಏನೋ ತೊಂದರೆ ಆಗಿದೆ ಎನ್ನುವ ಅನುಮಾನವಿದೆ. ಈಗ ದೆಹಲಿ ಏರ್ಪೋರ್ಟ್ನಲ್ಲಿದ್ದೇವೆ. ಮಧ್ಯಾಹ್ನ 2.30ಕ್ಕೆ ಅಮೃತಸರ ವಿಮಾನವಿದೆ. ಸಂಜೆ ವೇಳೆಗೆ ಅಲ್ಲಿ ತಲುಪುತ್ತೇವೆ ಎಂದು ಹೇಳಿದ್ದಾರೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…