ಧರ್ಮಸ್ಥಳ ಗ್ರಾಮದ ಯುವತಿ ಪಂಜಾಬಿನಲ್ಲಿ ನಿಗೂಢ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತ ಯುವತಿಯನ್ನು ಧರ್ಮಸ್ಥಳ ಗ್ರಾಮದ ಬೋಳಿಯಾರ್ ನಿವಾಸಿ ಸುರೇಂದ್ರ ಮತ್ತು ಸಿಂಧೂದೇವಿ ದಂಪತಿ ಪುತ್ರಿ, ಏರೋಸ್ಪೇಸ್ ಉದ್ಯೋಗಿ ಆಕಾಂಕ್ಷ ಎಂದು ಗುರುತಿಸಲಾಗಿದೆ.
ಪಂಜಾಬಿನ ಎಲ್‌ಪಿಯು ಪಗ್ವಾಡ ಕಾಲೇಜಿನಲ್ಲಿ ಉನ್ನತ ಶಿಕ್ಷಣ ಪಡೆದು, ಕಳೆದ ಆರು ತಿಂಗಳ ಹಿಂದೆ ಏರೋಸ್ಪೇಸ್ ಇಂಜಿನಿಯರ್ ಆಗಿ ಡೆಲ್ಲಿಯಲ್ಲಿ ಉದ್ಯೋಗದಲ್ಲಿದ್ರು. ಮುಂದೆ ಜಪಾನ್‌ಗೆ ಉದ್ಯೋಗಕ್ಕೆ ಹೋಗುವವರಿದ್ದು ಪಂಜಾಬ್ ಎಲ್ ಪಿಯು ಪಗ್ವಾಡ ಕಾಲೇಜಿನಿಂದ ಸರ್ಟಿಫಿಕೇಟ್ ಪಡೆಯಲು ತೆರಳಿದ್ಲು. ಸರ್ಟಿಫಿಕೇಟ್ ಪಡೆದ ಕೂಡಲೇ ಮನೆಯವರಲ್ಲಿ ಪೋನ್ ಮಾಡಿ ಮಾತನಾಡಿದ್ದರೆಂದು ತಿಳಿದು ಬಂದಿದೆ. ಇದಾದ ಬಳಿಕ ಈಕೆ ನಿಗೂಢವಾಗಿ ಸಾವನ್ನಪ್ಪಿದ್ದು ,ಪಂಜಾಬ್ ನ ಜಲಂದರ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಟುಂಬದವರು ಪಂಜಾಬ್‌ಗೆ ಪ್ರಯಾಣ ಬೆಳೆಸಿದ್ದಾರೆ. ಹೆಚ್ಚಿನ ಮಾಹಿತಿಗಳು ಕುಟುಂಬದವರು ಪಂಜಾಬ್ ತಲುಪಿದ ಬಳಿಕವಷ್ಟೆ ತಿಳಿದು ಬರಬೇಕಾಗಿದೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…