ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಯ ಮುಖವನ್ನು ವಿಶ್ವವೇದಿಕೆಯಲ್ಲಿ ಬಹಿರಂಗಪಡಿಸಲು ಕೇಂದ್ರ ಸರ್ಕಾರ ಅಂತಿಮಗೊಳಿಸಿದ ಸರ್ವ ಪಕ್ಷಗಳ ನಿಯೋಗಕ್ಕೆ ದಕ್ಷಿಣ ಕನ್ನಡದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಆಯ್ಕೆಯಾಗಿದ್ದಾರೆ.
ರಾಷ್ಟ್ರಮಟ್ಟದ ಈ ನಿಯೋಗಕ್ಕೆ ಕ್ಯಾ. ಚೌಟ ಅವರು ನೇಮಕವಾಗಿರುವುದನ್ನು ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ತಿಳಿಸಿದ್ದಾರೆ. ಕ್ಯಾ. ಚೌಟ ಒಳಗೊಂಡಂತೆ ವಿಶ್ವ ವೇದಿಕೆಯ ಈ ನಿಯೋಗದಲ್ಲಿ ಕರ್ನಾಟಕದಿಂದ ಇಬ್ಬರು ಸಂಸದರು ಆಯ್ಕೆ ಆಗಿದ್ದಾರೆ. ಅದರಲ್ಲೂ ಕರಾವಳಿ ಕರ್ನಾಟಕದಿಂದ ಕ್ಯಾ. ಚೌಟ ಆಯ್ಕೆಯಾಗಿದ್ದಾರೆ. 59 ಸದಸ್ಯರ ತಂಡವನ್ನು ಒಟ್ಟು ಏಳು ನಿಯೋಗಗಳನ್ನಾಗಿ ಮಾಡಿ ವಿವಿಧ ದೇಶಗಳಿಗೆ ಕಳುಹಿಸಿಕೊಡಲಾಗುತ್ತಿದ್ದು, ಈ ಪೈಕಿ ಡಿಎಂಕೆಯ ಕನಿಮೊಳಿ ನೇತೃತ್ವದ ತಂಡದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಸೇರಿ ಐವರು ಸಂಸದರು ಮೂವರು ಅಧಿಕಾರಿಗಳು ಇರಲಿದ್ದು, ಇವರು ಗ್ರೀಸ್ , ರಷ್ಯಾ, ಸ್ಪೇನ್, ಸ್ಲೊವೇನಿಯ್ ಹಾಗೂ ಲಾಟ್ವಿಯ ದೇಶಗಳಿಗೆ ಭೇಟಿ ನೀಡಲಿದ್ದಾರೆ.
ಕ್ಯಾ. ಚೌಟ ಆಯ್ಕೆಯ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು “ಭಯೋತ್ಪಾನೆ ವಿರುದ್ದ ಹಾಗೂ ಪಾಕಿಸ್ತಾನ ಮೇಲಿನ ಅಪರೇಷನ್ ಸಿಂದೂರ್ ಬಗ್ಗೆ ಜಗತ್ತಿಗೆ ವಾಸ್ತವ ವಿಚಾರವನ್ನು ತಿಳಿಸುವ ಸರ್ವ ಪಕ್ಷದ ನಿಯೋಗದಲ್ಲಿ ಕ್ಯಾ. ಚೌಟ ಸ್ಥಾನ ಪಡೆದಿರುವುದು ದಕ್ಷಿಣ ಕನ್ನಡ ಜಿಲ್ಲೆಗೆ ಅತ್ಯಂತ ಖುಷಿಯ ಹಾಗೂ ಹೆಮ್ಮೆಯ ವಿಚಾರ. ಸೇನೆಯಲ್ಲಿದ್ದು ದೇಶ ಸೇವೆ ಮಾಡಿರುವ ಕ್ಯಾ. ಚೌಟ ಅವರ ಆಯ್ಕೆ ಅತ್ಯಂತ ಔಚಿತ್ಯಪೂರ್ಣವಾಗಿದೆ. ಏಕೆಂದರೆ ನಮ್ಮ ದೇಶದ ಸೇನಾಪಡೆಯು ಪಾಕಿಸ್ತಾನದಲ್ಲಿ ಅಡಗಿದ್ದ ಉಗ್ರರನ್ನು ಸದೆಬಡಿಯುವ ಮೂಲಕ ಭಾರತದ ಶಕ್ತಿಯನ್ನು ಇಡೀ ಜಗತ್ತಿಗೆ ತೋರಿಸಿಕೊಟ್ಟಿದೆ ಎಂದ್ರು.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್‌ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್‌ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್‌ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…