ಜನ ಮನದ ನಾಡಿ ಮಿಡಿತ

Advertisement

ಮಂಗಳೂರು : ಬುರ್ಖಾಧಾರಿ ಮಹಿಳೆಯರನ್ನು ಯಾಕೆ ಬಂಧಿಸಿಲ್ಲ ಎಂದಿದ್ದಕ್ಕೆ ಹಿಂದೂ ನಾಯಕಿ ಶ್ವೇತಾ ಪೂಜಾರಿ ವಿರುದ್ಧ ಎಫ್‌ಐಆರ್!

ಇತ್ತೀಚಿಗೆ ಬಜ್ಪೆಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಘಟನಾ ಸ್ಥಳದಲ್ಲಿ ಕಾಣಿಸಿಕೊಂಡ ಬುರ್ಖಾಧಾರಿ ಮಹಿಳೆಯರನ್ನು ಯಾಕೆ ಬಂಧಿಸಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಉದ್ದೇಶಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನಿಸಿದ್ದ ಹಿಂದೂ ನಾಯಕಿ, ಬಿಜೆಪಿ ಮಹಿಳಾಮೋರ್ಚಾ ರಾಜ್ಯ ಕಾರ್ಯದರ್ಶಿ, ಮನಪಾ ನಿಕಟಪೂರ್ವ ಸದಸ್ಯೆ ಶ್ವೇತಾ ಪೂಜಾರಿ ಮೇಲೆ ಎಫ್‌ಐಆರ್ ದಾಖಲಾಗಿದ್ದು ವ್ಯಾಪಕ ಖಂಡನೆ ವ್ಯಕ್ತವಾಗಿದೆ.

ಸುಹಾಸ್ ಶೆಟ್ಟಿ ಹತ್ಯೆಯ ಸಂದರ್ಭ ಹಂತಕರ ಜೊತೆ ಮಾತಾಡಿದ್ದ ಇಬ್ಬರು ಬುರ್ಖಾಧಾರಿ ಮಹಿಳೆಯರ ಬಗ್ಗೆ ವ್ಯಾಪಕ ಅನುಮಾನ ವ್ಯಕ್ತವಾಗಿತ್ತು. ಈ ವೇಳೆ ಶ್ವೇತಾ ಪೂಜಾರಿ ಅವರು ಫೇಸ್ಬುಕ್ ಪೋಸ್ಟ್ ನಲ್ಲಿ ಬುರ್ಖಾಧಾರಿ ಮಹಿಳೆಯರನ್ನು ಯಾಕೆ ಬಂಧಿಸಿಲ್ಲ? ದ.ಕ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಈ ಬಗ್ಗೆ ಯಾಕೆ ಮಾತಾಡುತ್ತಿಲ್ಲ? ಎಂಬರ್ಥದಲ್ಲಿ ಪೋಸ್ಟ್ ಮಾಡಿದ್ರು. ಇದನ್ನೇ ಮುಂದಿಟ್ಟುಕೊAಡು ಕಾಂಗ್ರೆಸ್ ಸದಸ್ಯೆಯೋರ್ವರು ಪೊಲೀಸರಿಗೆ ದೂರು ನೀಡಿದ್ದು ದೂರು ದಾಖಲಾಗುತ್ತಿದ್ದಂತೆ ಪೊಲೀಸರು ಶ್ವೇತಾ ಪೂಜಾರಿ ಮೇಲೆ ಎಫ್‌ಐಆರ್ ದಾಖಲಿಸಿದ್ದಾರೆ. ಇದು ಹಿಂದೂ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದ್ದು ಹಿಂದುತ್ವದ ಪರ ಹೋರಾಟ ಮಾಡುವವರನ್ನು ದಮನಿಸುವ ಹೀನ ಕೆಲಸಕ್ಕೆ ಕಾಂಗ್ರೆಸ್ ಕೈ ಹಾಕಿದೆ. ಈ ಮೂಲಕ ಅಭಿವ್ಯಕ್ತಿ ಸ್ವಾತಂತ್ರ‍್ಯಕ್ಕೆ ಧಕ್ಕೆ ತರಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!