ಇತ್ತೀಚಿಗೆ ಬಜ್ಪೆಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಘಟನಾ ಸ್ಥಳದಲ್ಲಿ ಕಾಣಿಸಿಕೊಂಡ ಬುರ್ಖಾಧಾರಿ ಮಹಿಳೆಯರನ್ನು ಯಾಕೆ ಬಂಧಿಸಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಉದ್ದೇಶಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನಿಸಿದ್ದ ಹಿಂದೂ ನಾಯಕಿ, ಬಿಜೆಪಿ ಮಹಿಳಾಮೋರ್ಚಾ ರಾಜ್ಯ ಕಾರ್ಯದರ್ಶಿ, ಮನಪಾ ನಿಕಟಪೂರ್ವ ಸದಸ್ಯೆ ಶ್ವೇತಾ ಪೂಜಾರಿ ಮೇಲೆ ಎಫ್‌ಐಆರ್ ದಾಖಲಾಗಿದ್ದು ವ್ಯಾಪಕ ಖಂಡನೆ ವ್ಯಕ್ತವಾಗಿದೆ.
ಸುಹಾಸ್ ಶೆಟ್ಟಿ ಹತ್ಯೆಯ ಸಂದರ್ಭ ಹಂತಕರ ಜೊತೆ ಮಾತಾಡಿದ್ದ ಇಬ್ಬರು ಬುರ್ಖಾಧಾರಿ ಮಹಿಳೆಯರ ಬಗ್ಗೆ ವ್ಯಾಪಕ ಅನುಮಾನ ವ್ಯಕ್ತವಾಗಿತ್ತು. ಈ ವೇಳೆ ಶ್ವೇತಾ ಪೂಜಾರಿ ಅವರು ಫೇಸ್ಬುಕ್ ಪೋಸ್ಟ್ ನಲ್ಲಿ ಬುರ್ಖಾಧಾರಿ ಮಹಿಳೆಯರನ್ನು ಯಾಕೆ ಬಂಧಿಸಿಲ್ಲ? ದ.ಕ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಈ ಬಗ್ಗೆ ಯಾಕೆ ಮಾತಾಡುತ್ತಿಲ್ಲ? ಎಂಬರ್ಥದಲ್ಲಿ ಪೋಸ್ಟ್ ಮಾಡಿದ್ರು. ಇದನ್ನೇ ಮುಂದಿಟ್ಟುಕೊAಡು ಕಾಂಗ್ರೆಸ್ ಸದಸ್ಯೆಯೋರ್ವರು ಪೊಲೀಸರಿಗೆ ದೂರು ನೀಡಿದ್ದು ದೂರು ದಾಖಲಾಗುತ್ತಿದ್ದಂತೆ ಪೊಲೀಸರು ಶ್ವೇತಾ ಪೂಜಾರಿ ಮೇಲೆ ಎಫ್‌ಐಆರ್ ದಾಖಲಿಸಿದ್ದಾರೆ. ಇದು ಹಿಂದೂ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದ್ದು ಹಿಂದುತ್ವದ ಪರ ಹೋರಾಟ ಮಾಡುವವರನ್ನು ದಮನಿಸುವ ಹೀನ ಕೆಲಸಕ್ಕೆ ಕಾಂಗ್ರೆಸ್ ಕೈ ಹಾಕಿದೆ. ಈ ಮೂಲಕ ಅಭಿವ್ಯಕ್ತಿ ಸ್ವಾತಂತ್ರ‍್ಯಕ್ಕೆ ಧಕ್ಕೆ ತರಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…