ಪುತ್ತೂರು ಬೈಪಾಸ್ ರಸ್ತೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಉರ್ಲಾಂಡಿಯಲ್ಲಿ ರಸ್ತೆ ಪಕ್ಕದಲ್ಲಿ ನಿಂತಿದ್ದ ಶಾಮಿಯಾನದ ಲಾರಿಗೆ ಬೈಕ್ ಡಿಕ್ಕಿಯಾಗಿ ಸವಾರರೊಬ್ಬರು ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ನಡೆದಿದೆ.

ಬೈಕ್ ಸವಾರ ಕುಂಜೂರುಪಂಜ ಸಮೀಪದ ಸುದೀಪ್ ಚೊಕ್ಕಾಡಿ ಎಂಬವರು ಮೃತಪಟ್ಟವರಾಗಿದ್ದಾರೆ. ಅವರು ಮಚ್ಚಿಮಲೆ ಮನೆಯಿಂದ ನೇರಳಕಟ್ಟೆ ತಂಗಿ ಮನೆಗೆ ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಪುತ್ತೂರು ನಗರ ಸಂಚಾರಿ ಠಾಣೆಯ ಪೊಲೀಸರು ಘಟನ ಸ್ಥಳಕ್ಕೆ ಬಂದು ಪರಿಶೀಲಿಸಿ ದೂರು ದಾಖಲಿಸಿದ್ದಾರೆ.



