ಜಿಎಸ್ಟಿ ಸಂಗ್ರಹಣೆಯಲ್ಲಿ ಕರ್ನಾಟಕ ರಾಜ್ಯ ದೇಶದಲ್ಲಿ ದ್ವಿತೀಯ ಸ್ಥಾನದಲ್ಲಿದ್ದು, ಮುಂದಿನ ದಿನಗಳಲ್ಲಿ ಎರಡನೇ ಸ್ಥಾನಕ್ಕೆ ಬರಲು ಪ್ರಯತ್ನಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಣಿಜ್ಯ ತೆರಿಗೆ ಅಧಿಕಾರಿಗಳಿಗೆ ತಿಳಿಸಿದ್ದಾರೆ.
ಅವರು ಕರ್ನಾಟಕ ವಾಣಿಜ್ಯ ತೆರಿಗೆಗಳ ಸೇವಾ ಸಂಘ ಬೆಂಗಳೂರು ಇವರ ವತಿಯಿಂದ ಆಯೋಜಿಸಲಾಗಿದ್ದ ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ್ರು. ಸರ್ಕಾರದ ಯಶಸ್ವಿ ಆಡಳಿತಕ್ಕೆ ಎರಡು ವರ್ಷ, ಸಂಘವು 50 ವರ್ಷಗಳ ಮೈಲಿಗಲ್ಲನ್ನು ಸಾಧಿಸಿದ್ದು, ಇದಕ್ಕಾಗಿ ಶ್ರಮಿಸಿದ ಸಂಘದ ಎಲ್ಲ ಪದಾಧಿಕಾರಿಗಳಿಗೆ ಅಭಿನಂದನೆಗಳು. ನಿಮ್ಮೆಲ್ಲರ ಸಹಕಾರದಿಂದ ನಾನು ಆರ್ಥಿಕ ಇಲಾಖೆಯ ಜವಾಬ್ದಾರಿಯನ್ನು ದೀರ್ಘ ಕಾಲದವರೆಗೆ ನಿಭಾಯಿಸಲು ಸಾಧ್ಯವಾಯಿತು. ನಾನು ಹಣಕಾಸು ಮಂತ್ರಿಯಾಗಿ, ಉಪಮುಖ್ಯಮಂತ್ರಿಯಾಗಿ ಹಾಗೂ ಮುಖ್ಯಮಂತ್ರಿಯಾಗಿ ಹಣಕಾಸು ಇಲಾಖೆಯ ಕಾರ್ಯಭಾರವನ್ನು ನಿರ್ವಹಿಸಿದ್ದೇನೆ. ಈಗ ಸರ್ಕಾರದ ಯಶಸ್ವಿ ಆಡಳಿತಕ್ಕೆ ಎರಡು ವರ್ಷ ಪೂರೈಸಿದ್ದು, ಮೇ 20 ರಂದು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಸಮಾವೇಶವನ್ನು ಏರ್ಪಡಿಸಲಾಗಿದೆ ಎಂದಿದ್ದಾರೆ.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…