ರಾಜ್ಯ ಕಾಂಗ್ರೆಸ್ ಸರ್ಕಾರ ಯಶಸ್ವಿಯಾಗಿ ಎರಡು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಮೇ 20ರಂದು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಸಾಧನಾ ಸಮಾವೇಶ ಆಯೋಜಿಸಲಾಗಿದ್ದು, ಸುಮಾರು ಮೂರು ಲಕ್ಷ ಜನರು ಭಾಗವಹಿಸುವ ನಿರೀಕ್ಷೆಯಿದೆ ಎಂದು ಕೆಪಿಸಿಸಿ ರಾಜ್ಯ ಕಾರ್ಯದರ್ಶಿ ಲಾವಣ್ಯ ಬಲ್ಲಾಳ್ ತಿಳಿಸಿದ್ದಾರೆ.
ಈ ಕುರಿತು ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಕಳೆದ ಎರಡು ವರ್ಷಗಳಲ್ಲಿ ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ಜನರಿಗೆ ತಿಳಿಸಲು ನಾವು ಪ್ರಯತ್ನಿಸುತ್ತೇವೆ. ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಿಗೆ ಯಾವುದೇ ಹಣದ ಕೊರತೆಯಿಲ್ಲ. ಈಗಾಗಲೇ ಗ್ಯಾರಂಟಿ ಯೋಜನೆಗಳಿಗೆ 90 ಸಾವಿರ ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ. 2024-25ನೇ ಸಾಲಿನಲ್ಲಿ 51 ಸಾವಿರ ಕೋಟಿ ರೂಪಾಯಿಗಳನ್ನು ಅಭಿವೃದ್ಧಿ ಕಾರ್ಯಗಳಿಗೆ ವಿನಿಯೋಗಿಸಲಾಗಿದೆ. ಕಳೆದ ವರ್ಷ ಗ್ಯಾರಂಟಿ ಯೋಜನೆಗಳಿಗಾಗಿಯೇ 52.9 ಸಾವಿರ ಕೋಟಿ ರೂ. ಮೀಸಲಿಡಲಾಗಿತ್ತು. ಈ ವರ್ಷ 50.18 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ, ಅಗತ್ಯಬಿದ್ದಲ್ಲಿ ಇನ್ನು ಹೆಚ್ಚಿನ ಅನುದಾನ ನೀಡಲು ಸರಕಾರ ಬದ್ಧವಾಗಿದೆ. ನಮ್ಮ ಸರ್ಕಾರ ಜಾರಿಗೊಳಿಸಿದ ಗ್ಯಾರಂಟಿ ಯೋಜನೆಗಳು ದೇಶಕ್ಕೆ ಮಾದರಿಯಾಗಿವೆ ಎಂದು ಹೇಳಿದ್ದಾರೆ. ಇನ್ನು ಈ ಸುದ್ದಿಗೋಷ್ಠಿಯಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲ್, ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ಮುಖಂಡರಾದ ಬಿಪಿನ್ ಚಂದ್ರಪಾಲ್ ನಕ್ರೆ, ಮಹಾಬಲ ಕುಂದರ್ ಉಪಸ್ಥಿತರಿದ್ರು.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…