ಪ್ರವಾಸಿಗರ ಆಕರ್ಷಣೀಯ ತಾಣವಾದ ಮಲ್ಪೆ ಸೈಂಟ್‌ಮೇರಿಸ್ ದ್ವೀಪ ಪ್ರವೇಶಕ್ಕೆ 4 ತಿಂಗಳ ಕಾಲ ನಿರ್ಬಂಧ ಹೇರಲಾಗಿದೆ. ಜತೆಗೆ ಎಲ್ಲ ಜಲಸಾಹಸ ಕ್ರೀಡೆಗಳನ್ನು ಅಲ್ಲಿಯವರೆಗೆ ಸ್ಥಗಿತಗೊಳಿಸಲಾಗಿದೆ.

ಮಳೆಗಾಲದಲ್ಲಿ ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿರುವ ಕಾರಣ ದ್ವೀಪಕ್ಕೆ ತೆರಳುವುದು ಅಪಾಯಕಾರಿ. ಈ ಕಾರಣಕ್ಕಾಗಿ ಪ್ರತಿ ವರ್ಷ ಮೇ 15 ರಿಂದ ಸೆಪ್ಟೆಂಬರ್ 15 ರವರೆಗೆ ಜಿಲ್ಲಾಡಳಿತ ನಿರ್ಬಂಧ ವಿಧಿಸುತ್ತದೆ. ಮಳೆಗಾಲದಲ್ಲಿ ಪಶ್ಚಿಮ ಕರಾವಳಿಯಲ್ಲಿ ಬೋಟ್ ಚಲಾಯಿಸಲು ಅನುಮತಿ ಇರುವುದಿಲ್ಲ. ಹಾರ್ಬರ್ ಕ್ರಾಫ್ಟ್ ನಿಯಮಗಳ ಅನ್ವಯ ಪ್ರತೀವರ್ಷ ಸ್ಥಗಿತಗೊಳಿಸಲಾಗುತ್ತದೆ. ಬೇಸಿಗೆ ರಜೆ ಹಿನ್ನೆಲೆಯಲ್ಲಿ ಈಗ ಪ್ರತಿನಿತ್ಯ ಸಾವಿರಾರು ಪ್ರವಾಸಿಗರು ಈ ಸುಂದರ ದ್ವೀಪಕ್ಕೆ ಬರುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬೋಟ್ ಹಾಗೂ ಜಲಸಾಹಸ ಕ್ರೀಡೆಗೆ ಕೆಲವು ದಿನಗಳ ಮಟ್ಟಿಗೆ ಅವಕಾಶ ನೀಡಬೇಕೆಂಬ ಒತ್ತಾಯವೂ ಕೇಳಿಬಂದಿದೆ. ನಿಯಮಗಳ ಪ್ರಕಾರ ಮೇ 16ರಿಂದ 4 ತಿಂಗಳು ನಿಷೇಧವಿರಲಿದೆ. ಸಮುದ್ರ ತೀರದಲ್ಲಿ ವಾತಾವರಣದ ಅನುಕೂಲ ಆಧರಿಸಿ ಜೂನ್ 1 ರ ವರೆಗೆ ನೀರಿಗಿಳಿಯಬಹುದು. ಬಳಿಕ ಬೀಚ್‌ನ ಉದ್ದಕ್ಕೂ ತಡೆಬೇಲಿ ಹಾಕಲಾಗುತ್ತದೆ. ಹಾಗಾಗಿ ದೂರದೂರುಗಳ ಪ್ರವಾಸಿಗರು ಇನ್ನು ಮಳೆಗಾಲದ ನಂತರವೇ ಇಲ್ಲಿಗೆ ಬರುವುದು ಉತ್ತಮ.



