ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಮಲ್ಪೆ ಸೈಂಟ್‌ಮೇರಿಸ್ ದ್ವೀಪ ಪ್ರವೇಶಕ್ಕೆ 4 ತಿಂಗಳ ಕಾಲ ನಿರ್ಬಂಧ

ಪ್ರವಾಸಿಗರ ಆಕರ್ಷಣೀಯ ತಾಣವಾದ ಮಲ್ಪೆ ಸೈಂಟ್‌ಮೇರಿಸ್ ದ್ವೀಪ ಪ್ರವೇಶಕ್ಕೆ 4 ತಿಂಗಳ ಕಾಲ ನಿರ್ಬಂಧ ಹೇರಲಾಗಿದೆ. ಜತೆಗೆ ಎಲ್ಲ ಜಲಸಾಹಸ ಕ್ರೀಡೆಗಳನ್ನು ಅಲ್ಲಿಯವರೆಗೆ ಸ್ಥಗಿತಗೊಳಿಸಲಾಗಿದೆ.

ಮಳೆಗಾಲದಲ್ಲಿ ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿರುವ ಕಾರಣ ದ್ವೀಪಕ್ಕೆ ತೆರಳುವುದು ಅಪಾಯಕಾರಿ. ಈ ಕಾರಣಕ್ಕಾಗಿ ಪ್ರತಿ ವರ್ಷ ಮೇ 15 ರಿಂದ ಸೆಪ್ಟೆಂಬರ್ 15 ರವರೆಗೆ ಜಿಲ್ಲಾಡಳಿತ ನಿರ್ಬಂಧ ವಿಧಿಸುತ್ತದೆ. ಮಳೆಗಾಲದಲ್ಲಿ ಪಶ್ಚಿಮ ಕರಾವಳಿಯಲ್ಲಿ ಬೋಟ್ ಚಲಾಯಿಸಲು ಅನುಮತಿ ಇರುವುದಿಲ್ಲ. ಹಾರ್ಬರ್ ಕ್ರಾಫ್ಟ್ ನಿಯಮಗಳ ಅನ್ವಯ ಪ್ರತೀವರ್ಷ ಸ್ಥಗಿತಗೊಳಿಸಲಾಗುತ್ತದೆ. ಬೇಸಿಗೆ ರಜೆ ಹಿನ್ನೆಲೆಯಲ್ಲಿ ಈಗ ಪ್ರತಿನಿತ್ಯ ಸಾವಿರಾರು ಪ್ರವಾಸಿಗರು ಈ ಸುಂದರ ದ್ವೀಪಕ್ಕೆ ಬರುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬೋಟ್ ಹಾಗೂ ಜಲಸಾಹಸ ಕ್ರೀಡೆಗೆ ಕೆಲವು ದಿನಗಳ ಮಟ್ಟಿಗೆ ಅವಕಾಶ ನೀಡಬೇಕೆಂಬ ಒತ್ತಾಯವೂ ಕೇಳಿಬಂದಿದೆ. ನಿಯಮಗಳ ಪ್ರಕಾರ ಮೇ 16ರಿಂದ 4 ತಿಂಗಳು ನಿಷೇಧವಿರಲಿದೆ. ಸಮುದ್ರ ತೀರದಲ್ಲಿ ವಾತಾವರಣದ ಅನುಕೂಲ ಆಧರಿಸಿ ಜೂನ್ 1 ರ ವರೆಗೆ ನೀರಿಗಿಳಿಯಬಹುದು. ಬಳಿಕ ಬೀಚ್‌ನ ಉದ್ದಕ್ಕೂ ತಡೆಬೇಲಿ ಹಾಕಲಾಗುತ್ತದೆ. ಹಾಗಾಗಿ ದೂರದೂರುಗಳ ಪ್ರವಾಸಿಗರು ಇನ್ನು ಮಳೆಗಾಲದ ನಂತರವೇ ಇಲ್ಲಿಗೆ ಬರುವುದು ಉತ್ತಮ.

Leave a Reply

Your email address will not be published. Required fields are marked *

ಮಂಗಳೂರು: ಕ್ರೀಡಾಪಟು ಎಂ.ಆರ್. ಪೂವಮ್ಮಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ

ಮಂಗಳೂರು: 2026ನೇ ಸಾಲಿನ ಕಾರಂತ ಪ್ರಶಸ್ತಿಗೆ ಹಿರಿಯ ಸಾಹಿತಿ ವೈದೇಹಿ ಆಯ್ಕೆ..!

ಕಡಬ: ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಸಾವು

ಮಂಗಳೂರು: ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ಹೆಚ್ಚಿಸಿ: ಎಂ.ಆರ್. ಪೂವಮ್ಮ ಆಗ್ರಹ

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

error: Content is protected !!