ಸೈನಿಕರ ಕ್ಷೇಮ, ದೇಶದ ಸುರಕ್ಷೆಗೆ ಪ್ರಾರ್ಥಿಸಿ ಉಡುಪಿ ಶ್ರೀ ಪೇಜಾವರ ಮಠಾಧೀಶರ ಮಾರ್ಗದರ್ಶನದಲ್ಲಿ ಸುದರ್ಶನ ಮಂತ್ರ ಯಾಗ ನಡೆಯಿತು.
ದೇಶದ ಗಡಿಭಾಗದಲ್ಲಿ ಶತ್ರುರಾಷ್ಟ್ರಗಳ ಸವಾಲುಗಳನ್ನೆದುರಿಸಿ ಯುದ್ಧ ಸನ್ನದ್ಧಸ್ಥಿತಿಯಲ್ಲಿ ದಿಟ್ಟತನದಿಂದ ದೇಶವನ್ನು ಕಾಯುತ್ತಾ ಸೈನಿಕರ ಯೋಗಕ್ಷೇಮ ಮತ್ತು ದೇಶದ ಸುರಕ್ಷೆ ಸಮೃದ್ಧಿಗಾಗಿ ಪ್ರಾರ್ಥಿಸಿ ಶ್ರೀ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ ಸಂಕಲ್ಪನಾನುಸಾರ ಈ ಯಾಗ ಹಮ್ಮಿಕೊಳ್ಳಲಾಗಿತ್ತು. ಉಡುಪಿಯ ಪ್ರಾಚೀನ ಸ್ಕಂದಾಲಯ ಮುಚ್ಚುಕೋಡು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಮಹಾಸುದರ್ಶನ ಮಂತ್ರ ಯಾಗ ನೆರವೇರಿತು. ವಿದ್ವಾನ್ ಕುಕ್ಕಿಕಟ್ಟೆ ರಾಮಕೃಷ್ಣ ತಂತ್ರಿಗಳ ಮಾರ್ಗದರ್ಶನದಲ್ಲಿ ವಿದ್ವಾನ್ ಸಗ್ರಿ ಆನಂದತೀರ್ಥಾಚಾರ್ಯರು, ವಿದ್ವಾನ್ ಲಕ್ಷ್ಮೀನಾರಾಯಣ ತಂತ್ರಿ ಮತ್ತು ವಿದ್ವಾನ್ ಕೆ ಜೆ ಪವನಕುಮಾರರು ಯಾಗವನ್ನು ನೆರವೇರಿಸಿದ್ರು. ಪೂರ್ಣಾಹುತಿಯಲ್ಲಿ ಪಾಲ್ಗೊಂಡ ಶ್ರೀಗಳು ದೇವಸೇನಾಧಿಪತಿಯಾದ ಸುಬ್ರಹ್ಮಣ್ಯ ದೇವರ ಸನ್ನಿಧಿಯಲ್ಲಿ ನಡೆಸಿದ ಈ ಯಾಗದ ಪೂರ್ಣ ಶ್ರೇಯಸ್ಸು ದೇಶದ ಗಡಿಕಾಯುವ ಸೈನಿಕರ ಶ್ರೇಯಸ್ಸಿಗಾಗಿ ದೇಶದ ಸುರಕ್ಷತೆಗಾಗಿ ಅರ್ಪಿಸೋಣ. ಯಾವುದೇ ಉದ್ವಿಗ್ನ ಪರಿಸ್ಥಿತಿಯಲ್ಲೂ ಎದೆಗುಂದದೇ ದೇಶಕ್ಕೆ ಜಯ ತಂದುಕೊAಡುವ ಅದ್ಭುತ ಶಕ್ತಿಯನ್ನು ಸೈನಿಕರಿಗೆ ದೇವರು ಕರುಣಿಸಲಿ ಎಂದು ಪ್ರಾರ್ಥಿಸಿದ್ರು.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…