ಸೆಕ್ಯೂರಿಟಿ ಕೆಲಸ ಮುಗಿಸಿ ಕಂಪೆನಿ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ತಮಿಳುನಾಡು ಮೂಲದ ವ್ಯಕ್ತಿಯೋರ್ವರಿಗೆ ಹಿಂಬದಿಯಿ0ದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ಪಾಣೆಮಂಗಳೂರಿನ ಬೋಳಂಗಡಿ ಎಂಬಲ್ಲಿ ನಡೆದಿದೆ.
ತಮಿಳುನಾಡು ಮೂಲದ ಸುರರಾಮ್ ಬುಗ್ಗಪ್ಪ (50) ಮೃತಪಟ್ಟ ವ್ಯಕ್ತಿ. ಇವರು ಕೆ.ಎನ್.ಆರ್.ಸಿ.ಕಂಪೆನಿಯ ಸೆಕ್ಯುರಿಟಿ ಕಾರ್ಮಿಕನಾಗಿದ್ದು, ರಸ್ತೆಯ ಬದಿಯಲ್ಲಿ ಕಾಮಗಾರಿ ಹಿನ್ನಲೆಯಲ್ಲಿ ದಾಸ್ತಾನು ಮಾಡಲಾಗಿರುವ ಕಚ್ಚಾ ವಸ್ತುಗಳನ್ನು ಕಾಯುತ್ತಿದ್ದು, ರಾತ್ರಿ ಪಾಳಿಯ ಕೆಲಸ ಮುಗಿಸಿ ಬೆಳಿಗ್ಗೆ ಕಂಪೆನಿ ಕಡೆಗೆ ರಸ್ತೆಯ ಬದಿಯಲ್ಲಿ ನಡೆದುಕೊಂಡು ಬರುತ್ತಿದ್ದ ವೇಳೆ ಪಾಣೆಮಂಗಳೂರು ಗ್ರಾಮದ ಬೋಳಂಗಡಿ ಮಸೀದಿ ಎದುರಿನಲ್ಲಿ ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಖಾಸಗಿ ಬಸ್ ಹಿಂಬದಿಯಿ0ದ ಡಿಕ್ಕಿ ಹೊಡೆದು ನಿಲ್ಲಿಸದೆ ಪರಾರಿಯಾಗಿದ್ದ. ಗಾಯಗೊಂಡ ಕಾರ್ಮಿಕನನ್ನು ಕೂಡಲೇ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆಯಾದರೂ ಗಂಭೀರವಾಗಿ ಗಾಯಗೊಂಡಿದ್ದ ಸುರರಾಮ್ ಮೃತಪಟ್ಟ ಬಗ್ಗೆ ವೈದ್ಯರು ತಿಳಿಸಿದ್ದಾರೆ. ಪರಾರಿಯಾಗಿದ್ದ ಎಸ್.ಆರ್.ಎಸ್. ಕಂಪೆನಿಗೆ ಸೇರಿದ ಬಸ್ ನ್ನು ಬಂಟ್ವಾಳ ಟ್ರಾಫಿಕ್ ಪೋಲೀಸರು ಕೆಲವೇ ಗಂಟೆಗಳಲ್ಲಿ ಪತ್ತೆ ಹಚ್ಚಿ ಠಾಣೆಗೆ ತಂದುನಿಲ್ಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…