ಪವಿತ್ರ ಹಜ್ ಯಾತ್ರೆಗೆ ಹೊರಡಲಿರುವ ಸ್ಪೀಕರ್ ಯು.ಟಿ.ಖಾದರ್ ಅವರನ್ನು ದ.ಕ.ಜಿಲ್ಲಾ ವಕ್ಫ್ ಸಲಹಾ ಸಮಿತಿಯ ವತಿಯಿಂದ ನಗರದ ಖಾಸಗಿ ಹೊಟೇಲಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೀಳ್ಕೊಡಲಾಯಿತು.
ಬಳಿಕ ಮಾತನಾಡಿದ ಅವರು, ನಾನು ಯಾವ ಸ್ಥಾನಮಾನವನ್ನೂ ಆಶಿಸಿದವನಲ್ಲ. ಶಾಸಕ ಸ್ಥಾನಕ್ಕೆ ಸ್ಪರ್ಧಿಸಲು, ಮಂತ್ರಿಯಾಗಲು ಯಾರದೇ ಶಿಫಾರಸು ಮಾಡಿಸಿದವನಲ್ಲ. ನಿಮ್ಮೆಲ್ಲರ ದುಆ, ಆಶೀರ್ವಾದವೇ ನನ್ನನ್ನು ಈ ಹಂತಕ್ಕೆ ತಲುಪಿಸಿದೆ. ನನ್ನ ಈವರೆಗಿನ ಬದುಕು ನೆಮ್ಮದಿಯಿಂದ ಕೂಡಿದೆ. ನಾಡಿನ, ಸಮುದಾಯದ ಹಿತಕ್ಕಾಗಿ ನಾನು ಅಲ್ಲಿ ಪ್ರಾರ್ಥಿಸುವೆ. ಈ ಸಾರ್ವಜನಿಕ ರಂಗದಲ್ಲಿ, ನಿಮ್ಮೊಂದಿಗಿನ ನನ್ನ ಒಡನಾಟದಲ್ಲಿ ಏನಾದರು ತಪ್ಪಾಗಿದ್ದರೆ, ಮನಸ್ಸಿಗೆ ನೋವಾಗಿದ್ದರೆ ಕ್ಷಮಿಸಿರಿ ಎಂದು ಯು.ಟಿ.ಖಾದರ್ ಹೇಳಿದ್ದಾರೆ.
ಇನ್ನು ಈ ಸಂದರ್ಭದಲ್ಲಿ ಹಜ್ ಯಾತ್ರೆಗೈಯಲಿರುವ ದಿ ನ್ಯಾಷನಲ್ ಕಮಿಷನ್ ಫಾರ್ ಅಲ್ಲೈಡ್ ಆ್ಯಂಡ್ ಹೆಲ್ತ್ಕೇರ್ ಕರ್ನಾಟಕ ರಾಜ್ಯಾಧ್ಯಕ್ಷ ಯು.ಟಿ. ಇಫ್ತಿಕಾರ್ ಅಲಿ ಅವರನ್ನು ಕೂಡ ಬೀಳ್ಗೊಡಲಾಯಿತು. ದ.ಕ.ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಅಬ್ದುಲ್ ನಾಸಿರ್ ಲಕ್ಕಿಸ್ಟಾರ್ ಅಧ್ಯಕ್ಷತೆ ವಹಿಸಿ ಮಾತನಾಡಿದ್ರು.
ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕೂಲಿ ಕಾರ್ಮಿಕನೊಬ್ಬ ಸ್ಥಳದಲ್ಲೇ…
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…