ವ್ಯವಹಾರ ಆಡಳಿತ ವಿಭಾಗ ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿ0ಗ್ ಅಂಡ್ ಮ್ಯಾನೇಜೆಂಟ್ ವತಿಯಿಂದ ಮೇ 23, 24 ರಂದು ಸಹ್ಯಾದ್ರಿ ಕಾರ್ನಿವಲ್ 2025 ಕಾರ್ಯಕ್ರಮವು ಕಾಲೇಜಿನ ಕ್ಯಾಂಪಸ್ ನಲ್ಲಿ ನಡೆಯಲ್ಲಿದೆ ಎಂದು ಪ್ರಾಂಶುಪಾಲರಾದ ಡಾ ಎಸ್ ಎಸ್ ಇಂಜಗನೇರಿ ನಗರದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿವಿಧ ಪದವಿ ವಿದ್ಯಾರ್ಥಿಗಳಿಗಾಗಿ ನಡೆಯುವ ಈ ಬೃಹತ್ ಕಾರ್ಯಕ್ರಮದಲ್ಲಿ ಉದ್ಯೋಗ ಮೇಳ, ಮಾರ್ಕೆಟ್ ವರ್ಸ. ಸ್ಟುಡೆಂಟ್ ಕಾರ್ನರ್, ಸಹ್ಯಾದ್ರಿ ವಿಜ್ ಕ್ವಿಜ್ 2025 ಮ್ಯಾನೇಜೆಂಟ್ ಫೆಸ್ಟ್ ಕಾರ್ಯಕ್ರಮ ನಡೆಯಲಿದ್ದು, 5 ಸಾವಿರಕ್ಕೂ ಅಧಿಕ ಸಂಖ್ಯೆಯ ವಿದ್ಯಾರ್ಥಿಗಳು ಭಾಗವಹಿಸುವ ನಿರೀಕ್ಷೆ ಇದೆ. ಸುಮಾರು 50ಕ್ಕಿಂತಲೂ ಹೆಚ್ಚು ಕಂಪನಿಗಳು ಪಾಲ್ಗೊಳ್ಳುವ ಉದ್ಯೋಗ ಮೇಳದಲ್ಲಿ ಈಗಾಗಲೇ ಸಾವಿರಕ್ಕಿಂತಲೂ ಹೆಚ್ಚು ವಿವಿಧ ಪದವಿಯ ವಿದ್ಯಾರ್ಥಿಗಳು ನೋಂದಣಿ ಮಾಡಿದ್ದಾರೆ. ಮಾರ್ಕೆಟ್ ವರ್ಷ ಮತ್ತು ಸ್ಟೂಡೆಂಟ್ ಕಾರ್ನರ್ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ವ್ಯವಹಾರ ಆಡಳಿತ ಕೌಶಲ್ಯವನ್ನು ಅಭಿವೃದ್ಧಿಪಡಿಸಿದರೆ. ಸಹ್ಯಾದ್ರಿ ವಿಜ್ ಕ್ವಿಜ್ ಕಳೆದ 10 ವರ್ಷಗಳಿಂದ ನಡೆಯುತ್ತಿರುವ ಯಶಸ್ವಿ ರಾಷ್ಟ್ರೀಯ ಮಟ್ಟದ ರಸಪ್ರಶ್ನೆ ಕಾರ್ಯಕ್ರಮವಾಗಿದೆ. ನ್ಯಾಷನಲ್ ಇನ್ಸಿಟ್ಯೂಟ್ ಆಫ್ ಪರ್ಸನಲ್ ಮ್ಯಾನೇಜೆಂಟ್ ಮಂಗಳೂರು ಚಾಪ್ಟರ್ ಇದರ ಸಹಾಯಯೋಗದೊಂದಿಗೆ ಸಂಶೋಧನೆಯಲ್ಲಿ ಗ್ರಂಥ ಪರಿಷ್ಕರಣ” ಎಂಬ ವಿಚಾರದ ಕುರಿತು ನಡೆಯುವ ಅಧ್ಯಾಪಕ ಅಭಿವೃದ್ಧಿ ಕಾರ್ಯಕ್ರಮ ದಲ್ಲಿ ವಿವಿಧ ಕಾಲೇಜುಗಳಿಂದ ಅಧ್ಯಾಪಕರು ಭಾಗವಹಿಸಲಿದ್ದಾರೆ . ಸುದ್ದಿಗೋಷ್ಠಿಯಲ್ಲಿ ಪ್ರೊ ರಮೇಶ್, ಪ್ರೊ ಮೋನಿಷಾ, ಪ್ರೊ ಪದ್ಮನಾಭ, ವಿದ್ಯಾರ್ಥಿ ನಾಯಕರಾದ ಪ್ರಜ್ವಲ್, ರಿತೇಶ್ ಉಪಸ್ಥಿತರಿದ್ದು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…