ಮಂಗಳೂರು ಜೈಲಲ್ಲಿ ಹೊಡೆದಾಟ ನಡೆದ ಘಟನೆ ನಡೆದಿದೆ.
ಜಿಲ್ಲಾ ಜೈಲಿನ ಕ್ವಾರಂಟೈನ್ ಸೆಲ್ ವಿಭಾಗದಲ್ಲಿರುವ ಕೆಲವು ವಿಚಾರಣಾಧೀನ ಕೈದಿಗಳು ತನ್ನ ಕಚೇರಿಯ ಮುಂಭಾಗ ನಿಂತು ಬಿ ಬ್ಯಾರಕ್‌ನಲ್ಲಿರುವ ಕೆಲವು ವಿಚಾರಣಾ ಕೈದಿಗಳನ್ನು ಗುರಾಯಿಸಿ ನೋಡಿದರು ಎಂಬ ಕಾರಣಕ್ಕೆ ಪರಸ್ಪರ ಅವಾಚ್ಯ ಶಬ್ದದಿಂದ ಬೈದಾಡಿಕೊಂಡಿದ್ದಾರೆ. ಅಲ್ಲದೆ ಸಿಮೆಂಟ್ ಬ್ಲಾಕ್‌ಗಳನ್ನು ಹೊಡೆದು ಅದರ ತುಂಡುಗಳನ್ನು ಎಸೆದಿದ್ದಾರೆ. ಬಿ ಬ್ಯಾರಕ್‌ನ ಮಧ್ಯದ್ವಾರದ ಗೇಟನ್ನು ದೂಡಿ ಹೊರಬಂದು ಕಚೇರಿಯ ಕೋಣೆಗೆ ನುಗ್ಗಿ ಬಾಗಿಲಿನ ಗ್ಲಾಸನ್ನು ಕೈಯಿಂದ ಹೊಡೆದು ಹಾನಿ ಮಾಡಿದ್ದಾರೆ. ಈ ವೇಳೆ ಅಲ್ಲಿದ್ದ ಒಬ್ಬ ಕೈದಿಯ ಕಾಲಿಗೆ ಗಾಯವಾಗಿದೆ ಎಂದು ಕಾರಾಗೃಹದ ಅಧೀಕ್ಷಕರು ನೀಡಿದ ದೂರಿನಂತೆ ಮಂಗಳೂರು ನಗರದ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…