ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಪ್ರಮುಖ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ದೂರುದಾರರಿಂದ 1,65,000ರೂಪಾಯಿ ಹಣವನ್ನು ಪಡೆದು ಅಲ್ಲದೇ ಸಾಕಷ್ಟು ಯುವಕರಿಗೆ ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಸುಮಾರು 1 ಕೋಟಿ 82 ಲಕ್ಷ ರೂಪಾಯಿ ಹಣವನ್ನು ಪಡೆದು ನಂಬಿಕೆ ದ್ರೋಹ ವಂಚಿಸಿದ್ದಕ್ಕಾಗಿ ಮಂಗಳೂರು ನಗರ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಸಿಸಿಬಿ ಘಟಕದಲ್ಲಿ ತನಿಖೆಯಲ್ಲಿತ್ತು. ಪ್ರಕರಣಕ್ಕೆ ಸಂಬAಧಿಸಿದ0ತೆ ಆರೋಪಿ ಮುಂಬಯಿಯ ವಾಸಿ ಮಸೀವುಲ್ಲಾ ಅತಿವುಲ್ಲಾ ಖಾನ್ ಎಂಬಾತನನ್ನು ಹೆಚ್ಚಿನ ತನಿಖೆ ಸಲುವಾಗಿ ಪೊಲೀಸ್ ಕಸ್ಟಡಿಗೆ ಪಡೆದುಕೊಳ್ಳಲಾಗಿದೆ. ಈ ಮೇಲಿನ ಎರಡೂ ಪ್ರಕರಣಗಳು ಮಂಗಳೂರು ಪೂರ್ವ ಪೊಲೀಸ್ ಠಾಣೆಯಿಂದ ಮುಂದಿನ ತನಿಖೆಯ ಬಗ್ಗೆ ಸಿಸಿಬಿ ಘಟಕಕ್ಕೆ ವರ್ಗಾಯಿಸಲಾಗಿದೆ.



