ಜನ ಮನದ ನಾಡಿ ಮಿಡಿತ

Advertisement

ಯೆನೆಪೊಯ ಮೆಡಿಕಲ್ ಕಾಲೇಜು 21ನೇ ಪದವಿ ಪ್ರದಾನ ಸಮಾರಂಭ

ಉಳ್ಳಾಲ: ವೈದ್ಯಕೀಯ ಎಂಬ ಪವಿತ್ರ ವೃತ್ತಿಗೆ ಕಾಲಿಟ್ಟಾಗ, ದಯೆ, ನಿಷ್ಠೆ ಮತ್ತು ಜೀವನಪೂರ್ತಿ ಕಲಿಯುವ ಮನೋಭಾವನೆ ನಿಮ್ಮ ಮಾರ್ಗದರ್ಶಕ ತತ್ವಗಳಾಗಲಿ. ಮಾನವತೆಗೆ ಸೇವೆ ಸಲ್ಲಿಸುವಲ್ಲಿ ಮತ್ತು ಆರೋಗ್ಯ ವಲಯವನ್ನು ಮುಂದಕ್ಕೆ ಕೊಂಡೊಯ್ಯುವಲ್ಲಿ ನಿಮ್ಮ ಪ್ರಯಾಣ ಸಾಧನಾಪೂರ್ಣವಾಗಲಿ. ಯೆನೆಪೊಯ ಮೆಡಿಕಲ್ ಕಾಲೇಜಿನ 21ನೇ ಪದವಿ ಪ್ರದಾನ ದಿನಾಚರಣೆಯಲ್ಲಿ ಭಾಗವಹಿಸುವುದು ಮತ್ತು ನಿಮ್ಮ ಜೀವನದ ಹೊಸ ಅಧ್ಯಾಯದ ಆರಂಭವನ್ನು ಸಾಕ್ಷಿಯಾಗುವುದು ನನಗೆ ಅತ್ಯಂತ ಗೌರವದ ವಿಷಯವಾಗಿದೆ ಎಂದು ವಿಶಾಖಪಟ್ಟಣದ ಹೋಮಿ ಬಾಬಾ ಕ್ಯಾನ್ಸರ್ ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದ ನಿರ್ದೇಶಕ ಡಾ. ಉಮೇಶ್ ಮಹಾಂತ್ ಶೆಟ್ಟಿ ಅಭಿಪ್ರಾಯಪಟ್ಟರು.

ದೇರಳಕಟ್ಟೆಯ ಯೆನೆಪೊಯ ವೈದ್ಯಕೀಯ ಕಾಲೇಜು (ಪರಿಗಣಿಸಲ್ಪಟ್ಟ ವಿಶ್ವವಿದ್ಯಾನಿಲಯ), ಇದರ ಯೆಂಡ್ಯುರನ್ಸ್ ಝೋನ್‌ನಲ್ಲಿ ಜರಗಿದ 21ನೇ ಪದವಿ ಪ್ರದಾನ ಸಮಾರಂಭದಲ್ಲಿ ಪದವಿ ಪ್ರಧಾನ ನೆರವೇರಿಸಿ ಮಾತನಾಡಿದರು.

ಕರ್ನಾಟಕ ವೈದ್ಯಕೀಯ ಮಂಡಳಿಯ ಅಧ್ಯಕ್ಷ, ಬಳ್ಳಾರಿ ಪೃಥ್ವಿ ಮಕ್ಕಳ ಆಸ್ಪತ್ರೆಯ ತಜ್ಞವೈದ್ಯ ಡಾ.ಯೋಗಾನಂದ ರೆಡ್ಡಿ ವೈ.ಸಿ ಮುಖ್ಯ ಅತಿಥಿಯಾಗಿ ಮಾತನಾಡಿ ಆಧುನಿಕ ವೈದ್ಯಕೀಯದಲ್ಲಿ ಮಾನವೀಯತೆ ಮತ್ತು ವೈಜ್ಞಾನಿಕ ಚಿಂತನೆಯ ಮಹತ್ವವನ್ನು ಅರಿಯಬೇಕಿದೆ ಎಂದರು.

ವೈದ್ಯಕೀಯ ಕಾಲೇಜು ಪ್ರಾಂಶುಪಾಲ ಡಾ. ಎಂ. ಎಸ್. ಮೂಸಬ್ಬ ಅಧ್ಯಕ್ಷತೆ ವಹಿಸಿದ್ದರು. ವೈದ್ಯಕೀಯ ಅಧೀಕ್ಷಕ ಡಾ. ಹಬೀಬ್ ರಹಮಾನ್ ಪದವೀಧರರಿಗೆ ಪ್ರಮಾಣ ವಚನ ಬೋಧಿಸಿದರು. ಡೀನ್ ಡಾ. ಅಭಯ ನಿರ್ಗುಡೆ ಉಪಸ್ಥಿತರಿದ್ದರು.
ಡಾ. ಪ್ರಕಾಶ್ ಸಲ್ದಾನ್ಹ ವಂದಿಸಿದರು. ಬಳಿಕ ವಿದ್ಯಾರ್ಥಿಗಳ ನೃತ್ಯ, ಸಂಗೀತ, ನಾಟಕ ಮತ್ತು ಇತರ ಪ್ರತಿಭೆಗಳನ್ನೊಳಗೊಂಡ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ನ್ಯಾಕ್ ವತಿಯಿಂದ ಎ+ ಗ್ರೇಡ್ ಹೊಂದಿರುವ ಹಾಗೂ 2024ರ ಎನ್‌ಐಆರ್‌ಎಫ್ ರ‍್ಯಾಂಕಿAಗ್‌ನಲ್ಲಿ 95ನೇ ಸ್ಥಾನದಲ್ಲಿರುವ ಯೆನೆಪೊಯ ಮೆಡಿಕಲ್ ಕಾಲೇಜು, ಉತ್ತಮ ವೈದ್ಯಕೀಯ ಶಿಕ್ಷಣ ಮತ್ತು ಸಮಗ್ರ ವಿದ್ಯಾರ್ಥಿ ಅಭಿವೃದ್ಧಿಯಲ್ಲಿ ತನ್ನ ಮಟ್ಟಮೇಲಿನ ಕಾರ್ಯಕ್ಷಮತೆಯನ್ನು ಮುಂದುವರೆಸುತ್ತಿದೆ.

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!