ಉಳ್ಳಾಲ: ವೈದ್ಯಕೀಯ ಎಂಬ ಪವಿತ್ರ ವೃತ್ತಿಗೆ ಕಾಲಿಟ್ಟಾಗ, ದಯೆ, ನಿಷ್ಠೆ ಮತ್ತು ಜೀವನಪೂರ್ತಿ ಕಲಿಯುವ ಮನೋಭಾವನೆ ನಿಮ್ಮ ಮಾರ್ಗದರ್ಶಕ ತತ್ವಗಳಾಗಲಿ. ಮಾನವತೆಗೆ ಸೇವೆ ಸಲ್ಲಿಸುವಲ್ಲಿ ಮತ್ತು ಆರೋಗ್ಯ ವಲಯವನ್ನು ಮುಂದಕ್ಕೆ ಕೊಂಡೊಯ್ಯುವಲ್ಲಿ ನಿಮ್ಮ ಪ್ರಯಾಣ ಸಾಧನಾಪೂರ್ಣವಾಗಲಿ. ಯೆನೆಪೊಯ ಮೆಡಿಕಲ್ ಕಾಲೇಜಿನ 21ನೇ ಪದವಿ ಪ್ರದಾನ ದಿನಾಚರಣೆಯಲ್ಲಿ ಭಾಗವಹಿಸುವುದು ಮತ್ತು ನಿಮ್ಮ ಜೀವನದ ಹೊಸ ಅಧ್ಯಾಯದ ಆರಂಭವನ್ನು ಸಾಕ್ಷಿಯಾಗುವುದು ನನಗೆ ಅತ್ಯಂತ ಗೌರವದ ವಿಷಯವಾಗಿದೆ ಎಂದು ವಿಶಾಖಪಟ್ಟಣದ ಹೋಮಿ ಬಾಬಾ ಕ್ಯಾನ್ಸರ್ ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದ ನಿರ್ದೇಶಕ ಡಾ. ಉಮೇಶ್ ಮಹಾಂತ್ ಶೆಟ್ಟಿ ಅಭಿಪ್ರಾಯಪಟ್ಟರು.
ದೇರಳಕಟ್ಟೆಯ ಯೆನೆಪೊಯ ವೈದ್ಯಕೀಯ ಕಾಲೇಜು (ಪರಿಗಣಿಸಲ್ಪಟ್ಟ ವಿಶ್ವವಿದ್ಯಾನಿಲಯ), ಇದರ ಯೆಂಡ್ಯುರನ್ಸ್ ಝೋನ್‌ನಲ್ಲಿ ಜರಗಿದ 21ನೇ ಪದವಿ ಪ್ರದಾನ ಸಮಾರಂಭದಲ್ಲಿ ಪದವಿ ಪ್ರಧಾನ ನೆರವೇರಿಸಿ ಮಾತನಾಡಿದರು.
ಕರ್ನಾಟಕ ವೈದ್ಯಕೀಯ ಮಂಡಳಿಯ ಅಧ್ಯಕ್ಷ, ಬಳ್ಳಾರಿ ಪೃಥ್ವಿ ಮಕ್ಕಳ ಆಸ್ಪತ್ರೆಯ ತಜ್ಞವೈದ್ಯ ಡಾ.ಯೋಗಾನಂದ ರೆಡ್ಡಿ ವೈ.ಸಿ ಮುಖ್ಯ ಅತಿಥಿಯಾಗಿ ಮಾತನಾಡಿ ಆಧುನಿಕ ವೈದ್ಯಕೀಯದಲ್ಲಿ ಮಾನವೀಯತೆ ಮತ್ತು ವೈಜ್ಞಾನಿಕ ಚಿಂತನೆಯ ಮಹತ್ವವನ್ನು ಅರಿಯಬೇಕಿದೆ ಎಂದರು.
ವೈದ್ಯಕೀಯ ಕಾಲೇಜು ಪ್ರಾಂಶುಪಾಲ ಡಾ. ಎಂ. ಎಸ್. ಮೂಸಬ್ಬ ಅಧ್ಯಕ್ಷತೆ ವಹಿಸಿದ್ದರು. ವೈದ್ಯಕೀಯ ಅಧೀಕ್ಷಕ ಡಾ. ಹಬೀಬ್ ರಹಮಾನ್ ಪದವೀಧರರಿಗೆ ಪ್ರಮಾಣ ವಚನ ಬೋಧಿಸಿದರು. ಡೀನ್ ಡಾ. ಅಭಯ ನಿರ್ಗುಡೆ ಉಪಸ್ಥಿತರಿದ್ದರು.
ಡಾ. ಪ್ರಕಾಶ್ ಸಲ್ದಾನ್ಹ ವಂದಿಸಿದರು. ಬಳಿಕ ವಿದ್ಯಾರ್ಥಿಗಳ ನೃತ್ಯ, ಸಂಗೀತ, ನಾಟಕ ಮತ್ತು ಇತರ ಪ್ರತಿಭೆಗಳನ್ನೊಳಗೊಂಡ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ನ್ಯಾಕ್ ವತಿಯಿಂದ ಎ+ ಗ್ರೇಡ್ ಹೊಂದಿರುವ ಹಾಗೂ 2024ರ ಎನ್‌ಐಆರ್‌ಎಫ್ ರ‍್ಯಾಂಕಿAಗ್‌ನಲ್ಲಿ 95ನೇ ಸ್ಥಾನದಲ್ಲಿರುವ ಯೆನೆಪೊಯ ಮೆಡಿಕಲ್ ಕಾಲೇಜು, ಉತ್ತಮ ವೈದ್ಯಕೀಯ ಶಿಕ್ಷಣ ಮತ್ತು ಸಮಗ್ರ ವಿದ್ಯಾರ್ಥಿ ಅಭಿವೃದ್ಧಿಯಲ್ಲಿ ತನ್ನ ಮಟ್ಟಮೇಲಿನ ಕಾರ್ಯಕ್ಷಮತೆಯನ್ನು ಮುಂದುವರೆಸುತ್ತಿದೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…