ಪುತ್ತೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಆಪ್ತರಾದ ಪಾಂಬಾರು ಪ್ರದೀಪ್ ರೈ ಅವರ ಮೇಲೆ ಇಬ್ಬರು ಅಪರಿಚಿತರು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.

ಬೊಳುವಾರು ಆಸ್ಪತ್ರೆ ಬಳಿ ಪ್ರದೀಪ್ ರೈ ಕಾರು ನಿಲ್ಲಿಸುತಿದ್ದ ವೇಳೆ ಡಸ್ಟರ್ ಕಾರಿನಲ್ಲಿ ಬಂದ ತಂಡವೊಂದು ಅವಾಚ್ಯ ಶಬ್ದಗಳಿಂದ ನಿಂದಿಸಿ ನಂತರ ಹಲ್ಲೆ ನಡೆಸಿ ಪರಾರಿಯಾಗಿದೆ. ಪ್ರದೀಪ್ ರೈ ಕೈಯಲ್ಲಿದ್ದ ಉಂಗುರ ಹಾಗೂ ಸುಮಾರು 9 ಸಾವಿರ ನಗದು ಕದ್ದು ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ. ಹಲ್ಲೆಯಿಂದಾಗಿ ಗಾಯಗೊಂಡಿರುವ ಪ್ರದೀಪ್ ರೈ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಪ್ರದೀಪ್ ರೈ ಅವರು ಕೊಡಗು ಜಿಲ್ಲೆಯ ಸೋಮವಾರಪೇಟೆ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಉಸ್ತುವಾರಿಯಾಗಿದ್ದರು. ಪ್ರಕರಣವನ್ನು ಪುತ್ತೂರು ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ.



