ರಾಜ್ಯಾದ್ಯಂತ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಅದರಲ್ಲಿಯೂ ಕರಾವಳಿ ಭಾಗದಲ್ಲಿ ಪೂರ್ವ ಮುಂಗಾರು ಅಬ್ಬರಿಸುತ್ತಿದೆ. ಇನ್ನೂ ಕೆಲ ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದ್ದು, ಉಡುಪಿ, ದ.ಕ. ಜಿಲ್ಲಾದ್ಯಂತ ರೆಡ್ ಅಲರ್ಟ್ ಘೋಷಣೆಯಾಗಿದೆ.

ಉಡುಪಿ, ಹೆಬ್ರಿ, ಬೈಂದೂರು, ಪುತ್ತೂರು, ಭಾಗದಲ್ಲಿ ಜಿಟಿಜಿಟಿ ಮಳೆಯಾಗುತ್ತಿದೆ. ಸಮುದ್ರದಲ್ಲಿ ಅಲೆಗಳ ಭೋರ್ಗರೆತ ಹೆಚ್ಚಾಗಿದ್ದು, ಸಮುದ್ರಕ್ಕೆ ಇಳಿಯದಂತೆ ಜಿಲ್ಲಾಡಳಿತಗಳಿಂದ ಎಚ್ಚರಿಕೆ ನೀಡಲಾಗಿದೆ.



