ಜನ ಮನದ ನಾಡಿ ಮಿಡಿತ

Advertisement

ಬಿಜಾಪುರ: ಮತ್ತೆ ಅರಣ್ಯದಲ್ಲಿ ಗುಂಡಿನ ಸದ್ದು; 26 ಮಂದಿ ನಕ್ಸಲರು ಫಿನಿಷ್

ಛತ್ತೀಸಗಢದ ನಾರಾಯಣಪುರ ಹಾಗೂ ಬಿಜಾಪುರ ಜಿಲ್ಲೆಗಳ ಗಡಿಯಲ್ಲಿರುವ ಅರಣ್ಯದಲ್ಲಿ ನಕ್ಸಲರ ವಿರುದ್ಧ ಬಿಎಸ್‌ಎಫ್ ಹಾಗೂ ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ) ಬುಧವಾರ ಜಂಟಿ ಕಾರ್ಯಾಚರಣೆ ನಡೆಸಿದ್ದು, ಎನ್‌ಕೌಂಟರ್‌ನಲ್ಲಿ ಒಟ್ಟು 26 ನಕ್ಸಲರು ಮೃತಪಟ್ಟಿದ್ದಾರೆ.

ಗುಂಡಿನ ದಾಳಿಯಲ್ಲಿ ಓರ್ವ ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದು, ಮತ್ತೊಬ್ಬ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಭುಜ್‌ಮದ್ ಮತ್ತು ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದ ನಡುವಿನ ದಟ್ಟ ಅರಣ್ಯದಲ್ಲಿ ಬಿಎಸ್‌ಎಫ್ ಹಾಗೂ ನಾಲ್ಕು ಜಿಲ್ಲೆಗಳ ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ) ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಎನ್‌ಕೌಂಟ‌ರ್ ನಡೆದಿದೆ ಎಂದು ಉಪಮುಖ್ಯಮಂತ್ರಿ ವಿಜಯ್ ಶರ್ಮಾ ಹೇಳಿದ್ದಾರೆ.

ಘಟನಾ ಸ್ಥಳದಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆ ಮುಂದುವರಿದಿದೆ ಎಂದು ಅವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!