ಛತ್ತೀಸಗಢದ ನಾರಾಯಣಪುರ ಹಾಗೂ ಬಿಜಾಪುರ ಜಿಲ್ಲೆಗಳ ಗಡಿಯಲ್ಲಿರುವ ಅರಣ್ಯದಲ್ಲಿ ನಕ್ಸಲರ ವಿರುದ್ಧ ಬಿಎಸ್‌ಎಫ್ ಹಾಗೂ ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ) ಬುಧವಾರ ಜಂಟಿ ಕಾರ್ಯಾಚರಣೆ ನಡೆಸಿದ್ದು, ಎನ್‌ಕೌಂಟರ್‌ನಲ್ಲಿ ಒಟ್ಟು 26 ನಕ್ಸಲರು ಮೃತಪಟ್ಟಿದ್ದಾರೆ.
ಗುಂಡಿನ ದಾಳಿಯಲ್ಲಿ ಓರ್ವ ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದು, ಮತ್ತೊಬ್ಬ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಭುಜ್‌ಮದ್ ಮತ್ತು ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದ ನಡುವಿನ ದಟ್ಟ ಅರಣ್ಯದಲ್ಲಿ ಬಿಎಸ್‌ಎಫ್ ಹಾಗೂ ನಾಲ್ಕು ಜಿಲ್ಲೆಗಳ ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ) ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಎನ್‌ಕೌಂಟರ್ ನಡೆದಿದೆ ಎಂದು ಉಪಮುಖ್ಯಮಂತ್ರಿ ವಿಜಯ್ ಶರ್ಮಾ ಹೇಳಿದ್ದಾರೆ.
ಘಟನಾ ಸ್ಥಳದಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆ ಮುಂದುವರಿದಿದೆ ಎಂದು ಅವರು ತಿಳಿಸಿದ್ದಾರೆ.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…