ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಆಂಧ್ರಪ್ರದೇಶಕ್ಕೆ 4 ಕುಮ್ಕಿ ಆನೆಗಳನ್ನ ಹಸ್ತಾಂತರ ಮಾಡಿದೆ. ವಿಧಾನಸೌಧ ಮುಂಭಾಗದ ಭವ್ಯ ಮೆಟ್ಟಿಲುಗಳ ಮೇಲೆ ಈ ಹಸ್ತಾಂತರ ಕಾರ್ಯಕ್ರಮ ನಡೆದಿದೆ. ಡಿಸಿಎಂ ಪವನ್ ಕಲ್ಯಾಣ್ ಅವರು ಆನೆಗಳ ಹಸ್ತಾಂತರಿಸುವ ದಾಖಲೆಯನ್ನು ಸ್ವೀಕಾರ ಮಾಡಿದ್ದಾರೆ.
ವಿಧಾನಸೌಧ ಮುಂಭಾಗ ಜ್ಯೂನಿಯರ್ ಅಭಿಮನ್ಯು, ರಂಜನ್, ಕೃಷ್ಣ, ದೇವ ಆನೆಗಳಿಗೆ ಪೂಜೆ ನೆರವೇರಿಸಲಾಯಿತು. ಯುದ್ಧಕ್ಕೆ ಹೋಗುವ ಸೈನಿಕರಂತೆ ರಾಜ್ಯ ಸರ್ಕಾರ ಆಂಧ್ರಪ್ರದೇಶಕ್ಕೆ ಈ 4 ಕುುಮ್ಕಿ ಆನೆಗಳನ್ನ ಹಸ್ತಾಂತರ ಮಾಡಿದೆ. ಮಹೇಂದ್ರ ಆನೆ ಕುಮ್ಕಿ ಆನೆಗಳ ಬೆಂಬಲಕ್ಕೆ ಬಂದಿದ್ದು, ಆಂಧ್ರಪ್ರದೇಶಕ್ಕೆ ಕಳಿಸಿದ ಬಳಿಕ ವಾಪಸ್ ಆಗಲಿದೆ.
ಆಂಧ್ರಪ್ರದೇಶಕ್ಕೆ ರಾಜ್ಯದ ಕುಮ್ಮಿ ಆನೆಗಳ ಹಸ್ತಾಂತರ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಅರಣ್ಯ ಸಚಿವ ಈಶ್ವರ್ ಖಂಡ್ರೆ, ಇಂಧನ ಸಚಿವ ಕೆ.ಜೆ.ಜಾರ್ಜ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಭೈರತಿ ಸುರೇಶ್, ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ, ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಸೇರಿದಂತೆ ಆಂಧ್ರಪ್ರದೇಶದ ಹಿರಿಯ ಅಧಿಕಾರಿಗಳು ಸಹ ಹಾಜರಿದ್ದರು.
ರಾಜ್ಯದ ಆನೆಗಳನ್ನು ನೆರೆಯ ರಾಜ್ಯಕ್ಕೆ ಕಳುಹಿಸಲು ಪ್ರಮುಖವಾದ ಕಾರಣ ಅರಣ್ಯ ಭಾಗದಲ್ಲಿ ಕಾಡು ಪ್ರಾಣಿಗಳು ಹಾಗೂ ಮಾನವನ ಸಂಘರ್ಷ ತಪ್ಪಿಸುವುದಾಗಿದೆ .
ಪ್ರಾಣಿಗಳನ್ನು ಹಿಡಿಯಲು ಈ ಕುಮ್ಮಿ ಆನೆಗಳನ್ನು ಬಳಕೆ ಮಾಡಲಾಗುತ್ತದೆ. ದುಬಾರೆ ಸೇರಿದಂತೆ ಬೇರೆ ಬೇರೆ ಕಡೆ ಈ ಆನೆಗಳಿಗೆ ತರಬೇತಿ ನೀಡಲಾಗಿದೆ. ಮಾನವ-ಕಾಡು ಪ್ರಾಣಿಗಳ ಸಂಘರ್ಷ ತಪ್ಪಿಸಲು ಪಳಗಿಸಿದ ಕುಮ್ಮಿ ಆನೆಗಳನ್ನೇ ಆಂಧ್ರಕ್ಕೆ ಹಸ್ತಾಂತರ ಮಾಡಲಾಗಿದೆ.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್‌ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…