ಕರ್ನಾಟಕದ 6 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಕರ್ನಾಟಕದಾದ್ಯಂತ ಮಳೆಯಾಗುತ್ತಿದೆ. ಬೆಂಗಳೂರಲ್ಲೂ ಮೇ 26ರವರೆಗೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗಲಿದೆ. ಬಾಗಲಕೋಟೆ, ಧಾರವಾಡ, ಹಾವೇರಿ, ಹಾಸನ, ಕೊಡಗಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಭಾಗದಲ್ಲಿ ಪೂರ್ವ ಮುಂಗಾರು ಮಳೆ ಬಿರುಸು ಪಡೆಯುವ ಸಾಧ್ಯತೆ ಇದ್ದು, ಭಾರತೀಯ ಹವಾಮಾನ ಇಲಾಖೆಯು ಮೇ 20, 21 ರಂದು ರೆಡ್ ಅಲರ್ಟ್, ಮೇ 22 ರಿಂದ 25ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಈ ವೇಳೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಗುಡುಗು, ಸಿಡಿಲು, ಗಾಳಿಯಿಂದ ಕೂಡಿದ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ. ಬಿರುಸಿನ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ವಿಪತ್ತು ನಿರ್ವಹಣೆಯನ್ನು ಚಾಚೂ ತಪ್ಪದೇ ಕಡ್ಡಾಯವಾಗಿ ನಿರ್ವಹಿಸಬೇಕು, ಜಿಲ್ಲಾಮಟ್ಟದ ಮತ್ತು ತಾಲೂಕುಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರಬೇಕು, ಜಿಲ್ಲಾಡಳಿತವು ವಿವಿಧ ಪ್ರದೇಶಗಳಿಗೆ ನೇಮಿಸಲಾದ ಇನ್ಸಿಡೆಂಟ್ ಕಮಾಂಡರ್ ಜಾಗೃತರಾಗಿ ಸಾರ್ವಜನಿಕ ದೂರುಗಳಿಗೆ ತತ್‌ಕ್ಷಣ ಸ್ಪಂದಿಸಬೇಕು.
ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸಬೇಕು, ಮಕ್ಕಳು ಹಾಗೂ ಸಾರ್ವಜನಿಕರು ಅಪಾಯಕಾರಿ ಮರ ಮತ್ತು ವಿದ್ಯುತ್ ಕಂಬದ ಹತ್ತಿರ ಸುಳಿಯಬಾರದು. ತುಂಡಾದ ವಿದ್ಯುತ್ ತಂತಿಗಳಿ0ದ ದೂರವಿರಬೇಕು. ದುರ್ಬಲವಾದ ಅಥವಾ ಹಳೆಯ ಕಟ್ಟಡ/ಮರಗಳ ಹತ್ತಿರ, ಮರಗಳ ಕೆಳಗೆ ನಿಲ್ಲಬಾರದು ಎಂದು ಜಿಲ್ಲಾಡಳಿತ ಸೂಚಿಸಿದೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…