ಕೇಂದ್ರ ಸರಕಾರ ಜಾರಿ ಮಾಡಿರುವ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ವಿರೋಧಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಉಡುಪಿ ಜಿಲ್ಲಾ ಘಟಕದ ನೇತೃತ್ವದಲ್ಲಿ ಉಡುಪಿಯ ಅಜ್ಜರಕಾಡು ಹುತಾತ್ಮ ಸ್ಮಾರಕ ಬಳಿ ಪ್ರತಿಭಟನೆ ನಡೆಸಲಾಯಿತು. 
ಈ ಸಂದರ್ಭದಲ್ಲಿ ನಾಲ್ಕು ಕಾರ್ಮಿಕ ಸಂಹಿತೆಗಳ ಆದೇಶ ಪ್ರತಿಯನ್ನು ಸುಟ್ಟು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ರು. ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಸಿಐಟಿಯು ಉಡುಪಿ ಜಿಲ್ಲಾ ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ ಅವರು, ಕೇಂದ್ರ ಸರಕಾರ ಜಾರಿ ಮಾಡಿರುವ ವೇತನ ಸಂಹಿತೆ-2019, ಕೈಗಾರಿಕಾ ಸಂಬ0ಧಗಳ ಸಂಹಿತೆ-2020, ವೃತ್ತಿ ಆಧರಿತ ಸುರಕ್ಷತೆ, ಆರೋಗ್ಯ ಮತ್ತು ಕೆಲಸದ ಪರಿಸ್ಥಿತಿಗಳ ಸಂಹಿತೆ-2020, ಸಾಮಾಜಿಕ ಸುರಕ್ಷತಾ ಸಂಹಿತೆ-2020 ಕಾಯಿದೆಯನ್ನು ಸರಕಾರ ವಾಪಾಸು ಪಡೆಯಬೇಕು. ಬ್ಯಾಂಕ್ ಖಾಸಗಿಕರಣ ನಿಲ್ಲಿಸಬೇಕು. ಬ್ಯಾಂಕ್‌ಗಳ ವಿಲೀನ ನಿಲ್ಲಿಸಬೇಕು. ಶ್ರೀಮಂತ ವರ್ಗದವರಿಗೆ ರಿಯಾಯಿತಿ ನೀಡಬಾರದು ಎಂದು ಆಗ್ರಹಿಸಿದ್ದಾರೆ.



