ಇತರೆ

ಉಡುಪಿ: ಕೇಂದ್ರ ಸರಕಾರದ ಕಾರ್ಮಿಕ ಸಂಹಿತೆಗಳ ವಿರುದ್ಧ ಪ್ರತಿಭಟನೆ

ಕೇಂದ್ರ ಸರಕಾರ ಜಾರಿ ಮಾಡಿರುವ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ವಿರೋಧಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಉಡುಪಿ ಜಿಲ್ಲಾ ಘಟಕದ ನೇತೃತ್ವದಲ್ಲಿ ಉಡುಪಿಯ ಅಜ್ಜರಕಾಡು ಹುತಾತ್ಮ ಸ್ಮಾರಕ ಬಳಿ ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ನಾಲ್ಕು ಕಾರ್ಮಿಕ ಸಂಹಿತೆಗಳ ಆದೇಶ ಪ್ರತಿಯನ್ನು ಸುಟ್ಟು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ರು. ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಸಿಐಟಿಯು ಉಡುಪಿ ಜಿಲ್ಲಾ ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ ಅವರು, ಕೇಂದ್ರ ಸರಕಾರ ಜಾರಿ ಮಾಡಿರುವ ವೇತನ ಸಂಹಿತೆ-2019, ಕೈಗಾರಿಕಾ ಸಂಬ0ಧಗಳ ಸಂಹಿತೆ-2020, ವೃತ್ತಿ ಆಧರಿತ ಸುರಕ್ಷತೆ, ಆರೋಗ್ಯ ಮತ್ತು ಕೆಲಸದ ಪರಿಸ್ಥಿತಿಗಳ ಸಂಹಿತೆ-2020, ಸಾಮಾಜಿಕ ಸುರಕ್ಷತಾ ಸಂಹಿತೆ-2020 ಕಾಯಿದೆಯನ್ನು ಸರಕಾರ ವಾಪಾಸು ಪಡೆಯಬೇಕು. ಬ್ಯಾಂಕ್ ಖಾಸಗಿಕರಣ ನಿಲ್ಲಿಸಬೇಕು. ಬ್ಯಾಂಕ್‌ಗಳ ವಿಲೀನ ನಿಲ್ಲಿಸಬೇಕು. ಶ್ರೀಮಂತ ವರ್ಗದವರಿಗೆ ರಿಯಾಯಿತಿ ನೀಡಬಾರದು ಎಂದು ಆಗ್ರಹಿಸಿದ್ದಾರೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…

2 days ago

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.  …

3 days ago

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

  ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…

4 days ago

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…

6 days ago

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…

7 days ago