ತುಂಬೆ ಫಾದರ್ ಮುಲ್ಲರ್ ನರ್ಸಿಂಗ್ ಕಾಲೇಜಿನ ವತಿಯಿಂದ ಸ್ವಿಫ್ಟ್ ಹ್ಯಾಂಡ್ಸ್-ಸೇಫ್‌ಗಾಡಿAðಗ್ ಲಿಟಲ್ ಲೈವ್ಸ್ ಎಂಬ ಧ್ಯೇಯದಡಿ ಪೀಡಿಯಾಕಾನ್-2025 ಎಂಬ ಪ್ರಾದೇಶಿಕ ಸಮ್ಮೇಳನ ಮೇ 24ರಂದು ಬೆಳಗ್ಗೆ 9ರಿಂದ ಕಾಲೇಜಿನ ಫ್ಲೋರೆನ್ಸ್ ನೈಂಟಿಗೇಲ್ ಸಭಾಂಗಣದಲ್ಲಿ ಆಯೋಜನೆಗೊಂಡಿದೆ. 
ಮಕ್ಕಳ ಆರೋಗ್ಯ ಆರೋಗ್ಯ ರಕ್ಷಣೆಯ ದೃಷ್ಟಿಯಿಂದ ನರ್ಸ್ ಗಳ ಕೌಶಲ್ಯವೃದ್ಧಿಗೆ ಈ ಸಮ್ಮೇಳನ ಪೂರಕವಾಗಲಿದೆ ಎಂದು ಮಂಗಳೂರು ಫಾದರ್ ಮುಲ್ಲರ್ ಚಾರಿಟೇಬಲ್ ಇನ್‌ಸ್ಟಿಟ್ಯೂಶನ್ಸ್ ನಿರ್ದೇಶಕ ರೇ|ಫಾ| ರಿಚ್ಚಾರ್ಡ್ ಅಲೋಶಿಯಸ್ ಕುವೆಲ್ಲೊ ಹೇಳಿದ್ದಾರೆ. ಅವರು ತುಂಬೆ ಫಾದರ್ ಮುಲ್ಲರ್ ನರ್ಸಿಂಗ್ ಕಾಲೇಜಿನಲ್ಲಿ ಸಮ್ಮೇಳನದ ಆಮಂತ್ರಣ ಬಿಡುಗಡೆಗೊಳಿಸಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ರು.



