ಸಾಂಸ್ಕೃತಿಕವಾಗಿ ಮತ್ತು ಕ್ರಿಯಾಶೀಲ ಮನಸ್ಸುಗಳಿಗೆ ಮುದ ನೀಡುವ ಕಾರ್ಯಕ್ರಮ ‘ಡೆನ್ನಾನ ಡೆನ್ನನ’ ಜಾನಪದ ಶೈಲಿಯ ಕಿರು ನಾಟಕ ಸ್ಪರ್ಧೆಯು ಮೇ.25ರಂದು ಸುದಾನ ವಸತಿಯುತ ಶಾಲೆಯಲ್ಲಿ ಮೇಳೈಸಲಿದೆ ಎಂದು ಬಿಲ್ಲವ ಸಂಘದ ಯುವವಾಹಿನಿಯ ಕಾರ್ಯಕ್ರಮ ಸಂಯೋಜಕ ಪ್ರಭಾಕರ ಸಾಲ್ಯಾನ್ ಬಾಕಿಲಗುತ್ತು ಹೇಳಿದ್ದಾರೆ.
ಇವರು ಪುತ್ತೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ, ಯುವವಾಹಿನಿ ಪುತ್ತೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ಸಹಯೋಗದೊಂದಿಗೆ ನಡೆಯಲಿದೆ. ವಿದ್ಯೆ, ಉದ್ಯೋಗ, ಸಂಪರ್ಕ ಎಂಬ ಧೈಯ ಉದ್ದೇಶಗಳೊಂದಿಗೆ ರಾಜ್ಯಾದ್ಯಂತ ಯುವವಾಹಿನಿಯ 35 ಘಟಕಗಳು ಕಾರ್ಯನಿರ್ವಹಿಸುತ್ತಿದೆ. ಸಂಘದಲ್ಲಿ 4600 ಮಂದಿ ಸದಸ್ಯರಿರುವ ಯುವವಾಹಿನಿಯ ಸೇವಾ ಕಾರ್ಯಗಳಿಗೆ ಕರ್ನಾಟಕ ರಾಜ್ಯ ಸರಕಾರದಿಂದ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ. ಪ್ರತಿ ತಂಡಗಳಿಗೆ 20 ನಿಮಿಷಗಳ ಕಾಲವಕಾಶವಿದೆ. ಕಾರ್ಯಕ್ರಮದಲ್ಲಿ ವೈವಿದ್ಯಮಯ ಉಪಹಾರ, ಭೋಜನದ ವ್ಯವಸ್ಥೆ ಏರ್ಪಡಿಸಲಾಗಿದೆ ಎಂದ್ರು. ಇನ್ನು ಈ ಸಂದರ್ಭದಲ್ಲಿ ಯುವವಾಹಿನಿ ಪುತ್ತೂರು ಘಟಕದ ಅಧ್ಯಕ್ಷ ಅಣ್ಣಿ ಪೂಜಾರಿ, ಕಾರ್ಯದರ್ಶಿ ಶರತ್ ಕೈಪಂಗಳದೋಳ, ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಮಂದಿರದ ಕಾರ್ಯನಿರ್ವಹಣಾಧಿಕಾರಿ ಉದಯ ಕುಮಾರ್ ಕೋಲಾಡಿ ಉಪಸ್ಥಿತರಿದ್ರು.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…