ಬೆ0ಗಳೂರು ಮೇ 21: ಬೂಕರ್ ವೇದಿಕೆಯಲ್ಲಿ ಕನ್ನಡದ ಸಾಹಿತ್ಯದ ಹಿರಿಮೆಯನ್ನು ಎತ್ತಿ ಹಿಡಿದ ಲೇಖಕಿ, ಪತ್ರಕರ್ತೆ, ಕತೆಗಾರ್ತಿ ಭಾನು ಮುಷ್ತಾಕ್ ಅವರಿಗೆ ಅಂತಾರಾಷ್ಟ್ರೀಯ ಭೂಕರ್ ಪ್ರಶಸ್ತಿ ಲಭಿಸಿರುವುದು ಅವರ ಕತೆಗಳಲ್ಲಿ ಬೆಸೆದಿರುವ ಭಾರತೀಯತೆಯ ಬೆಸುಗೆಗೆ ಸಿಕ್ಕಿರುವ ಅಂತಾರಾಷ್ಟ್ರೀಯ ಮನ್ನಣೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಸಂತಸ ವ್ಯಕ್ತಪಡಿಸಿದ್ದಾರೆ.
ತಮ್ಮ ಲೇಖನ, ಭಾಷಣ ಮತ್ತು ಕತೆಗಳಲ್ಲಿ ನಮ್ಮ ನೆಲದ ಮೂಲ ಸತ್ವ ಮತ್ತು ಮೂಲ ತತ್ವ ಆಗಿರುವ ಸರ್ವ ಜನಾಂಗದ ಶಾಂತಿಯ ತೋಟ ಎನ್ನುವ ಮೌಲ್ಯವನ್ನು ಮತ್ತು ಜಾತ್ಯತೀತತೆಯನ್ನು ಬೆಸೆಯುವ ಕಾರ್ಯ ಮಾಡುತ್ತಲೇ ಬರುತ್ತಿದ್ದಾರೆ. ಇವರಿಗೆ ಬೂಕರ್ ಪ್ರಶಸ್ತಿ ಬಂದಿರುವುದು ಕನ್ನಡ ಸಾಹಿತ್ಯ ಮತ್ತು ಕನ್ನಡತನದ ಹಿರಿಮೆಯನ್ನು ಹೆಚ್ಚಿಸಿದ್ದು ಪ್ರತಿಯೊಬ್ಬ ಕನ್ನಡಿಗನೂ ಹೆಮ್ಮೆ ಪಡಬೇಕಾದ ಸಂದರ್ಭ ಇದಾಗಿದೆ. ವಿಶ್ವ ಮಾನವತೆಯ ಸದಾಶಯವನ್ನು ಎತ್ತಿ ಹಿಡಿಯುವ ಭಾನು ಮುಷ್ತಾಕ್ ಅವರ ಕತೆಗಳು ವಿಶ್ವದ ಎಲ್ಲಾ ಭಾಷೆಗಳಿಗೂ ಅನುವಾದಗೊಳ್ಳಬೇಕು ಎನ್ನುವುದು ನನ್ನ ಆಶಯ. ಭಾನು ಮುಷ್ತಾಕ್ ಅವರ ಹಸೀನಾ ಮತ್ತು ಇತರ ಕೃತೆಗಳು ನನಗೆ ಬಹಳ ಇಷ್ಟವಾದ ಸಂಕಲನ. ಇವರನ್ನು ಈ ಸಂದರ್ಭದಲ್ಲಿ ಅಭಿನಂದಿಸುತ್ತೇನೆ.
ಮಂಗಳೂರಿನ ಪ್ರಸಿದ್ಧ ಕ್ರಿಯಾಶೀಲ ರಂಗತಂಡ ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ವರ್ಷಂಪ್ರತಿ ಕೊಡಮಾಡುವ ರಂಗಭಾಸ್ಕರ ಪ್ರಶಸ್ತಿಯನ್ನು ಈ ಬಾರಿ ಪ್ರತಿಭಾನ್ವಿತ ಹಿರಿಯ…
ವಿದ್ಯುತ್ ಆಘಾತಕ್ಕೊಳಗಾಗಿ ಹೆಣ್ಣು ನವಿಲೊಂದು ದಾರುಣವಾಗಿ ಮೃತಪಟ್ಟ ಘಟನೆ ಇಂದು ಮುಂಜಾನೆ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಪಿಲಾರು ಮಹಾಲಕ್ಷ್ಮಿ ಮಂದಿರದ…
ಸರಕಾರಿ ಪ್ರೌಢ ಶಾಲೆ, ಮಂಚಿ - ಕೊಳ್ನಾಡು ಮತ್ತು ಹಿರಿಯ ವಿದ್ಯಾರ್ಥಿ ಸಂಘ ಮಂಚಿ ಕೊಳ್ನಾಡು ಇವರ ಸಂಯುಕ್ತ ಆಶ್ರಯದಲ್ಲಿ…
2026-27 ನೇ ಶೈಕ್ಷಣಿಕ ವರ್ಷದಲ್ಲಿ ಬಂಟ್ವಾಳ ತಾಲೂಕಿನ ಎರಡು ಸರಕಾರಿ ಶಾಲೆಯಲ್ಲಿ ಶೂನ್ಯ ದಾಖಲಾತಿಯಾಗಿದ್ದು, ಎರಡು ಶಾಲೆಗಳು ಮುಚ್ಚುವ ಭೀತಿಯನ್ನು…
ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…
ಎಂಆರ್‌ಜಿ ಸಮೂಹದ ಸಂಸ್ಥಾಪಕ ಹಾಗೂ ಅಧ್ಯಕ್ಷರಾದ ಡಾ. ಕೆ. ಪ್ರಕಾಶ್ ಶೆಟ್ಟಿ ಅವರು ತಮ್ಮ ಉದ್ಯಮ ಸಮೂಹಕ್ಕೆ ಖಾಸಗಿ ವಿಮಾನವನ್ನು…