ಜನ ಮನದ ನಾಡಿ ಮಿಡಿತ

Advertisement

ಮಂಗಳೂರು; ಭಾವೈಕ್ಯದ ಪ್ರತೀಕ ಎಂದೇ ಪ್ರಸಿದ್ಧ ಬ್ಯಾಷ್ಠಿಸ್ಟ್ ಡಿ’ಕುನ್ಹಾ ನಿಧನ

ಬಿಕರ್ಣಕಟ್ಟೆ ಜಯಶ್ರೀಗೇಟ್ ಇಲ್ಲಿನ ಹೋಲಿ ಫ್ಯಾಮಿಲಿ ನಿವಾಸಿ, ಬಂಟ್ವಾಳ ಪಾಣೆಮಂಗಳೂರುನಲ್ಲಿ ಟೈಲರ್ ವೃತ್ತಿ ನಡೆಸುತ್ತಾ ಭೌತಿಸ್ ಟೈಲರ್ ಎಂದೇ ಪ್ರಸಿದ್ಧಿ ಪಡೆದಿದ್ದ ಜನೋಪಕಾರಿ, ಕೊಡುಗೈದಾನಿ ಬ್ಯಾಷ್ಠಿಸ್ಟ್ ಡಿ’ಕುನ್ಹಾ (85) ಇಂದಿಲ್ಲಿ ಬುಧವಾರ ಮಂಗಳೂರುನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

 


ಬಂಟ್ವಾಳ ಪಾಣೆಮಂಗಳೂರು (ಕಲ್ಲಡ್ಕ ಮೊಗರ್ನಾಡ್) ಮಾತೆ ಇಗರ್ಜಿಯ ಪಾಲನಾ ಸಮಿತಿ ಸದಸ್ಯರಾಗಿ,ಮೆಲ್ಕಾರ್ ಯುವಕ ಸಂಘದ ಅಧ್ಯಕ್ಷರಾಗಿ ಮೆಲ್ಕಾರ್ ದಸರಾ (ಟ್ಯಾಬ್ಲೋ) ರೂವಾರಿ ಎಂದೆಣಿಸಿ ಎಲ್ಲಾ ಸಮುದಾಯದವರಲ್ಲೂ ಭಾವೈಕ್ಯತೆ ಹೊಂದಿ ಸಾಮರಸ್ಯದ ಬಾಳಿಗೆ ಪ್ರೇರಕರಾಗಿ ಪ್ರಸಿದ್ಧರೆನಿಸಿದ್ದರು.ಐವತ್ತು ದಶಕಗಳ ಹಿಂದೆಯೇ ಸುಮಾರು 37 ಧರ್ನಶಿಶು (ಮಕ್ಕಳ ಪೋಷಕ) ಹೊಂದಿ ಹಿತಪೋಷಕರೆಣಿಸಿ ಶ್ರೇಷ್ಠವ್ಯಕ್ತಿವೆಂದೇ ಗುರುತಿಸಿ ಜನಾನುರೆಸಿದ್ದರು. ಬಳಿಕ ಬಂಟ್ವಾಳ ಮೊಡಂಕಾಪು ಇಲ್ಲಿನ ಇನ್ಫೆoಟ್ ಜೀಸಸ್ ಚರ್ಚ್ ನಲ್ಲಿ ಪಾಲನಾ ಸಮಿತಿ ಸದಸ್ಯರಾಗಿ,ತಿಸ್ರಿ ಒಡ್ದ್ ಇದರ ಅಧ್ಯಕ್ಷರಾಗಿ, ಕಥೋಲಿಕ್ ಸಭಾ ಇದರ ಸಕ್ರಿಯ ಸದಸ್ಯರಾಗಿ, ಕೊಡುಗೈದಾನಿಯಾಗಿ ಅನುಪಮ ಸೇವೆ ಸಲ್ಲಿಸಿದ್ದು, ಸದ್ಯ ಮಂಗಳೂರು ಬಿಕರ್ಣಕಟ್ಟೆ ಇಲ್ಲಿನ ಜಯಶ್ರೀಗೇಟ್ ನ ಸ್ವನಿವಾಸದಲ್ಲಿ ನೆಲೆಸಿದ್ದರು.

ಮೃತರು ಪತ್ನಿ, ಇಬ್ಬರು ಸುಪುತ್ರಿಯರು, ಮೂವರು ಸುಪುತ್ರರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಮೃತರ ಅಂತ್ಯಕ್ರಿಯೆಯು
ನಾಳೆ ಗುರುವಾರ (ಮೇ. 23) ಮಧ್ಯಾಹ್ನ 2:00 ಗಂಟೆಗೆ ಸ್ವನಿವಾಸಕ್ಕೆ ತಂದು ಬಳಿಕ 2:45 ರಿಂದ 3:30ರ ವರೆಗೆ ಬಜ್ಜೋಡಿ ಅಲ್ಲಿನ ಇನ್ಫೆಂಟ್ ಮೇರಿ ಚರ್ಚ್‌ನಲ್ಲಿ ಸಾರ್ವಜನಿಕ ವೀಕ್ಷಣೆಗೆ ಇರಿಸಲಾಗುವುದು. 3:30 ಗಂಟೆಗೆ ಪೂಜೆ, ನಂತರ ಸೈoಟ್ ಸೆಬಾಸ್ಟಿಯನ್ ಚರ್ಚ್ (ಬೆಂದೂರು) ಇದರ ಸಮಾಧಿಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿದೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!