15 ವರ್ಷಗಳ ಹಿಂದೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಸಂಭವಿಸಿದ ಭೀಕರ ವಿಮಾನ ದುರಂತಲ್ಲಿ ಜೀವ ಕಳೆದುಕೊಂಡವರಿಗೆ ದ.ಕ ಜಿಲ್ಲಾಡಳಿತದಿಂದ ಇಂದು ಬೆಳಗ್ಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಬಜ್ಪೆ ವಿಮಾನ ದುರಂತದಲ್ಲಿ ಮಡಿದವರ ಸ್ಮರಣಾರ್ಥ ತಣ್ಣೀರುಬಾವಿ ಬಳಿಯ ನಿರ್ಮಿಸಲಾಗಿರುವ ಸ್ಮಾರಕದಲ್ಲಿ ಜಿಲ್ಲಾಡಳಿತದಿಂದ ಶ್ರದ್ಧಾಂಜಲಿ ಕಾರ್ಯವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ದ.ಕ. ಪ್ರಭಾರ ಜಿಲ್ಲಾಧಿಕಾರಿ ಡಾ.ಆನಂದ್, ಮಂಗಳೂರು ಮನಪಾ ಆಯುಕ್ತ ರವಿಚಂದ್ರ ನಾಯಕ್, ಪಣಂಬೂರು ಎಸಿಪಿ ಕೆ.ಶ್ರೀಕಾಂತ್, ತಹಶಿಲ್ದಾರರ ನವೀನ್ ಕುಮಾರ್ ಉಪಸ್ಥಿತರಿದ್ದು, ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದ್ರು.



