ಉಡುಪಿ: ಕುಂದಾಪುರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ನಂಜಪ್ಪ ಎನ್. (59) ಅವರು ಅನಾರೋಗ್ಯದಿಂದ ನಿಧನ ಹೊಂದಿದರು.
ಮೂಲತಃ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯವರಾದ ನಂಜಪ್ಪ ಅವರು, ಕಳೆದ ಆಗಸ್ಟ್ ತಿಂಗಳಿನಿಂದ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪೊಲೀಸ್ ನಿರೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು. ಸೋಮವಾರದಂದು ಕರ್ತವ್ಯದಲ್ಲಿರುವಾಗಲೇ ರಕ್ತದೊತ್ತಡದಿಂದ ಬಳಲುತ್ತಿದ್ದ ನಂಜಪ್ಪ ಅವರು ಚಿಕಿತ್ಸೆಗಾಗಿ ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಎರಡು ದಿನಗಳ ಕಾಲ ಚಿಕಿತ್ಸೆ ಪಡೆದರೂ ಅವರ ಆರೋಗ್ಯದಲ್ಲಿ ಯಾವುದೇ ಗಣನೀಯ ಚೇತರಿಕೆ ಕಂಡುಬಂದಿರಲಿಲ್ಲ. ಬುಧವಾರ ರಾತ್ರಿ ಅವರು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
2003ರಲ್ಲಿ ಉಪನಿರೀಕ್ಷಕರಾಗಿ ಸೇವೆಗೆ ನಿಯುಕ್ತಿಯಾಗಿದ್ದ ನಂಜಪ್ಪ, ಶಿವಮೊಗ್ಗ, ದಾವಣಗೆರೆ, ಹಾವೇರಿ ಮೊದಲಾದೆಡೆ ಕರ್ತವ್ಯ ನಿರ್ವಹಿಸಿದ್ದು ಬಳಿಕ ಪೊಲೀಸ್ ನಿರೀಕ್ಷಕರಾಗಿ ಆಗಿ ಬಡ್ತಿ ಹೊಂದಿ, ಕಡೂರು, ಭದ್ರಾವತಿಯಲ್ಲಿ ನಾಲ್ಕು ವರ್ಷಗಳ ಕಾಲ ಗಂಗೊಳ್ಳಿ ಕರಾವಳಿ ಕಾವಲು ಪಡೆಯಲ್ಲಿ ಕರ್ತವ್ಯ ನಿರ್ವಹಿಸಿ 2024 ಆಗಸ್ಟ್‌ನಲ್ಲಿ ಕುಂದಾಪುರ ಠಾಣೆ ಪೊಲೀಸ್ ನಿರೀಕ್ಷಕರಾಗಿ ನಿಯುಕ್ತಿಗೊಂಡಿದ್ದರು.
ಇಂದು ಬೆಳಿಗ್ಗೆ ಜಿಲ್ಲಾಸ್ಪತ್ರೆಯಲ್ಲಿ ಎಸ್ಪಿ ಡಾ. ಅರುಣ್ ಕುಮಾರ್ ಅವರ ನೇತೃತ್ವದಲ್ಲಿ ಮೃತರ ಪಾರ್ಥಿವ ಶರೀರಕ್ಕೆ ಗೌರವ ಸಲ್ಲಿಸಲಾಯಿತು. ಎಎಸ್ಪಿ ಸುಧಾಕರ್ ನಾಯ್ಕ್, ಎ ಎಸ್ ಪಿ ಪರಮೇಶ್ವರ್ ಹೆಗ್ಡೆ ಹಾಗೂ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಅಂತಿಮ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಮಾಜ ಸೇವಕ ನಿತ್ಯಾನಂದ ಒಳಕಾಡು ಸಹಕರಿಸಿದರು.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…