ಉಡುಪಿ: ದೆಹಲಿಯ NSD ವಿದ್ಯಾರ್ಥಿಗಳಿಗೆ ಗುರು ಬನ್ನಂಜೆ ಸಂಜೀವ ಸುವರ್ಣ ರಿಂದ ಯಕ್ಷಗಾನ ತರಬೇತಿ ಶಿಬಿರ ಆರಂಭವಾಗಿದೆ. ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ತಿಂಗಳೆಯಲ್ಲಿ ತಿಂಗಳೆ ಪ್ರತಿಷ್ಠಾನದ ಸಹಯೋಗದೊಂದಿಗೆ ಈ 11 ದಿನಗಳ ಶಿಬಿರ ನಡೆಯಲಿದೆ.
ಶಿಬಿರಕ್ಕೆ ಉದ್ಯಮಿ ಕೊಲ್ಲಬೆಟ್ಟು ರವೀಂದ್ರ ಶೆಟ್ಟಿ ಚಾಲನೆ ನೀಡಿದರು. ಗುರು ಸಂಜೀವ ಸುವರ್ಣ ಅವರಲ್ಲಿ ಯಕ್ಷಗಾನ ತರಬೇತಿ ಪಡೆಯುವುದೇ ಪೂರ್ವ ಜನ್ಮದ ಸುಕೃತ ಎಂದು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಗುರು ಬನ್ನಂಜೆ ಸಂಜೀವ ಸುವರ್ಣ ಮಾತನಾಡಿ, ಕಲಿಯುವ ತುಡಿತ ಸಾಧನೆಯ ಛಲ ಇವೆರಡು ಇದ್ದರೆ ಸಾಕು ಯಾವ ಕಲೆಯನ್ನು ಸುಲಲಿತವಾಗಿ ಅಭ್ಯಾಸ ಮಾಡಬಹುದು ಎಂದರು.
ವೇದಿಕೆಯಲ್ಲಿ ತಿಂಗಳೆ ಪ್ರತಿಷ್ಠಾನದ ಮುಖ್ಯಸ್ಥರಾದ ತಿಂಗಳೆ ವಿಕ್ರಮಾರ್ಜುನ ಹೆಗ್ಗಡೆ, ಎನ್ ಎಸ್ ಡಿ ದೆಹಲಿ ಇದರ ಮುಖ್ಯಸ್ಥರಾದ ಪ್ರೊ.ವಿವೇಕ್, ಭಾಗವತರಾದ ಲಂಬೋಧರ ಹೆಗಡೆ, ಶ್ರೀಧರ ಹೆಗಡೆ ಉಪಸ್ಥಿತರಿದ್ದರು.
ಬನ್ನಂಜೆ ಸಂಜೀವ ಸುವರ್ಣ ರ ಶಿಷ್ಯರಾದ ಶೃತಿ ಬಂಗೇರ , ಪಲ್ಲವಿ ಕೊಡಗು , ಶಿಶಿರ್, ಮನೋಜ್, ಕಾರ್ತಿಕ್ ,ಸುಮಂತ್ ತಂಡದವರು ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು.
ದೆಹಲಿ NSD ಯ 30 ವಿದ್ಯಾರ್ಥಿಗಳು ಮುಂದಿನ 10 ದಿನಗಳ ಕಾಲ ನಡೆಯುವ ಶಿಬಿರದಲ್ಲಿ ಭಾಗವಹಿಸಿ ಯಕ್ಷಗಾನವನ್ನು ಅಭ್ಯಾಸ ಮಾಡಲಿದ್ದಾರೆ. ಡಾ ಪ್ರಶಾಂತ ಶೆಟ್ಟಿ ಕಾರ್ಯಕ್ರಮ ಸ್ವಾಗತಿಸಿ ನಿರೂಪಿಸಿದರು
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…