ಕಟಪಾಡಿ- ಶಿರ್ವ ರಾಜ್ಯ ಹೆದ್ದಾರಿಯ ಶಂಕರಪುರ ಹೃದಯಭಾಗದಲ್ಲಿ ಕೇಬಲ್ ಅಳವಡಿಸಲು ಅಗೆದಿರುವ ಗುಂಡಿಯು ಮೃತ್ಯು ಕೂಪವಾಗಿ ಪರಿಣಮಿಸಿದೆ.
ಶಂಕರಪುರ ಬಸ್ ನಿಲ್ದಾಣದ ಸಮೀಪ ಕೇಬಲ್ ಅಳವಡಿಸುವ ಸಲುವಾಗಿ ಬೃಹತ್ ಗುಂಡಿಯನ್ನು ತೆಗೆದಿದ್ದು, ಅದನ್ನು ಮುಚ್ಚದೆ ಬಿಟ್ಟುಹೋಗಿದ್ದಾರೆ. ಇದೀಗ ಈ ಗುಂಡಿಯು ಅಪಾಯವನ್ನು ಆಹ್ವಾನಿಸುತ್ತಿದೆ. ಈಗಾಗಲೇ ಮಳೆ ಕೂಡ ಆರಂಭವಾಗಿದ್ದು, ಗುಂಡಿಯಲ್ಲಿ ಮಳೆ ನೀರು ನಿಂತು ಸಾವು ನೋವು ಸಂಭವಿಸುವ ಸಾಧ್ಯತೆ ಇದೆ. ಕಟಪಾಡಿ- ಶಿರ್ವ ರಾಜ್ಯ ಹೆದ್ದಾರಿ ಹೊಸದಾಗಿ ಡಾಂಬರೀಕರಣ ಆಗಿ ತಿಂಗಳೆ ಕಳೆದಿಲ್ಲ. ಅಷ್ಟರೊಳಗೆ ಕೇಬಲ್ ಅಳವಡಿಕೆಗಾಗಿ ಗುಂಡಿ ಅಗೆದಿದ್ದಾರೆ. ಕಾಮಗಾರಿ ಮುಗಿದ ಬಳಿಕ ಗುಂಡಿಯನ್ನು ಮುಚ್ಚದೆ ಹಾಗೆಯೆ ಬಿಟ್ಟಿದ್ದು, ಇದು ಮಳೆಗಾಲದಲ್ಲಿ ಕುಸಿದು ರಸ್ತೆಯು ಹಾಳಾಗುವ ಸಾಧ್ಯತೆ ಇದೆ. ಹಾಗಾಗಿ ಸಂಬ0ಧಪಟ್ಟವರು ಕೂಡಲೇ ಗುಂಡಿಯನ್ನು ಮುಚ್ಚಿ ಮುಂದೆ ನಡೆಯಬಹುದಾದ ಅನಾಹುತವನ್ನು ತಪ್ಪಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…