ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಮನೆಯೊಳಗೆ ನುಗ್ಗಿ ಲಕ್ಷಾಂತರ ರೂ ಮೌಲ್ಯದ ಚಿನ್ನವನ್ನು ಕಳವು..!

 ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಯೊಳಗೆ ನುಗ್ಗಿ ಲಕ್ಷಾಂತರ ರೂ ಮೌಲ್ಯದ ಚಿನ್ನವನ್ನು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೋಲಿಸ್ ಇನ್ಸ್ ಪೆಕ್ಟರ್ ಶಿವಕುಮಾರ್ ನೇತ್ರತ್ವದ ತಂಡ ಬಂಧಿಸಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.


ಮೇ. 19 ರಂದು ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ತುಂಬೆ ಗ್ರಾಮದ ಹಾಮದ್ ಹಾಜಿ‌ರಸ್ತೆಯ ಪರ್ಲಬೈಲು ನಿವಾಸಿ ಮಜೀದ್ ಎಂಬವರ ಮನೆಯಲ್ಲಿ ಸುಮಾರು 1,49,000 ಸಾವಿರ ಮೌಲ್ಯದ 28 ಗ್ರಾಂ ತೂಕದ ಚಿನ್ನದ ನೆಕ್ಲೆಸ್ ಕಳವು ನಡೆದಿತ್ತು.‌‌ ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಯ ಮಹಡಿಯ ಹಂಚನ್ನು ಸರಿಸಿ ಒಳಪ್ರವೇಶಿಸಿ ಮನೆಯ ಕಪಾಟಿನಲ್ಲಿ ಇಟ್ಟಿದ್ದ ಚಿನ್ನವನ್ನು ಕಳವು ಮಾಡಿದ್ದರು.
ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.


ಪ್ರಕರಣದ ತನಿಖೆ ನಡೆಸಿದ ಬಂಟ್ವಾಳ ಗ್ರಾಮಾಂತರ ಠಾಣೆಯ ಪೋಲೀಸರು ಆರೋಪಿ ತುಂಬೆ ನಿವಾಸಿ ಹಸನ್ ಬಾವ ಎಂಬಾತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.


ಈ ಕಳ್ಳತನ ಪ್ರಕರಣವನ್ನು ಎಸ್.ಪಿ. ಯತೀಶ್‌ ಎನ್‌, ಹೆಚ್ಚುವರಿ ಪೋಲೀಸ್ ಅಧೀಕ್ಷಕ ರಾಜೇಂದ್ರ ಹೆಚ್ಚುವರಿ ಬಂಟ್ವಾಳ ಡಿ.ವೈ.ಎಸ್.ಪಿ‌.ವಿಜಯಪ್ರಸಾದ್ ರವರ ಮಾರ್ಗದರ್ಶನದಂತೆ, ಬಂಟ್ವಾಳ‌ ಗ್ರಾಮಾಂತರ ಪೊಲೀಸ್‌ ಠಾಣಾ ಪೊಲೀಸ್ ನಿರೀಕ್ಷಕರಾದ ಶಿವಕುಮಾರ ಬಿ.ರವರ ನೇತೃತ್ವದಲ್ಲಿ ಪಿಎಸ್‌ ಐ ಗಳಾದ ಮಂಜುನಾಥ ಟಿ, ಖೀರಪ್ಪ ಘಟಕಾಂಬಳೆ ,ಎ.ಎಸ್.‌ ಐ ಗಳಾದ ಗಿರೀಶ್‌,ಬಾಲಕೃಷ್ಣ ,ಹೆಚ್.ಸಿ. ಗಳಾದ ನಝೀರ್‌, ಹರಿಶ್ಚಂದ್ರ, ಲೋಕೇಶ್‌,ಕೃಷ್ಣ ನಾಯ್ಕ, ಪಿ.ಸಿ ಸಹದೇವ ಇವರುಗಳು ವಿಶೇಷ ಕಾರ್ಯಾಚರಣೆ ನಡೆಸಿರುತ್ತಾರೆ.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!