ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಯೊಳಗೆ ನುಗ್ಗಿ ಲಕ್ಷಾಂತರ ರೂ ಮೌಲ್ಯದ ಚಿನ್ನವನ್ನು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೋಲಿಸ್ ಇನ್ಸ್ ಪೆಕ್ಟರ್ ಶಿವಕುಮಾರ್ ನೇತ್ರತ್ವದ ತಂಡ ಬಂಧಿಸಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಮೇ. 19 ರಂದು ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ತುಂಬೆ ಗ್ರಾಮದ ಹಾಮದ್ ಹಾಜಿರಸ್ತೆಯ ಪರ್ಲಬೈಲು ನಿವಾಸಿ ಮಜೀದ್ ಎಂಬವರ ಮನೆಯಲ್ಲಿ ಸುಮಾರು 1,49,000 ಸಾವಿರ ಮೌಲ್ಯದ 28 ಗ್ರಾಂ ತೂಕದ ಚಿನ್ನದ ನೆಕ್ಲೆಸ್ ಕಳವು ನಡೆದಿತ್ತು. ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಯ ಮಹಡಿಯ ಹಂಚನ್ನು ಸರಿಸಿ ಒಳಪ್ರವೇಶಿಸಿ ಮನೆಯ ಕಪಾಟಿನಲ್ಲಿ ಇಟ್ಟಿದ್ದ ಚಿನ್ನವನ್ನು ಕಳವು ಮಾಡಿದ್ದರು.
ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಬಂಟ್ವಾಳ ಗ್ರಾಮಾಂತರ ಠಾಣೆಯ ಪೋಲೀಸರು ಆರೋಪಿ ತುಂಬೆ ನಿವಾಸಿ ಹಸನ್ ಬಾವ ಎಂಬಾತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಈ ಕಳ್ಳತನ ಪ್ರಕರಣವನ್ನು ಎಸ್.ಪಿ. ಯತೀಶ್ ಎನ್, ಹೆಚ್ಚುವರಿ ಪೋಲೀಸ್ ಅಧೀಕ್ಷಕ ರಾಜೇಂದ್ರ ಹೆಚ್ಚುವರಿ ಬಂಟ್ವಾಳ ಡಿ.ವೈ.ಎಸ್.ಪಿ.ವಿಜಯಪ್ರಸಾದ್ ರವರ ಮಾರ್ಗದರ್ಶನದಂತೆ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ಶಿವಕುಮಾರ ಬಿ.ರವರ ನೇತೃತ್ವದಲ್ಲಿ ಪಿಎಸ್ ಐ ಗಳಾದ ಮಂಜುನಾಥ ಟಿ, ಖೀರಪ್ಪ ಘಟಕಾಂಬಳೆ ,ಎ.ಎಸ್. ಐ ಗಳಾದ ಗಿರೀಶ್,ಬಾಲಕೃಷ್ಣ ,ಹೆಚ್.ಸಿ. ಗಳಾದ ನಝೀರ್, ಹರಿಶ್ಚಂದ್ರ, ಲೋಕೇಶ್,ಕೃಷ್ಣ ನಾಯ್ಕ, ಪಿ.ಸಿ ಸಹದೇವ ಇವರುಗಳು ವಿಶೇಷ ಕಾರ್ಯಾಚರಣೆ ನಡೆಸಿರುತ್ತಾರೆ.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…