ಕರ್ನಾಟಕ ರಾಜ್ಯಕ್ಕೆ ರಾಷ್ಟ್ರಪತಿಗಳಿಂದ ಅಧಿಸೂಚಿತ ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿ ಇಲ್ಲದ `ಮೇರಾ’ ಮತ್ತು `ಮಾನ್ಸಾ’ ಹೆಸರಿನ ಜಾತಿಗಳನ್ನು ಒಳ ಮೀಸಲಾತಿ ಕುರಿತ ಸಮೀಕ್ಷೆಯಲ್ಲಿ ಆದಿದ್ರಾವಿಡ ಪಟ್ಟಿಯಲ್ಲಿ ಸೇರಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಪ್ರಕಟಿಸಿರುವ ಉಡುಪಿ ಜಿಲ್ಲಾಧಿಕಾರಿಗಳ ಕ್ರಮವನ್ನು ಪರಿಶಿಷ್ಟ ಜಾತಿಗಳು ಮತ್ತು ಬುಡಕಟ್ಟುಗಳ ಸಂಘ ಸಂಸ್ಥೆಗಳ ಮಹಾ ಒಕ್ಕೂಟವು ವಿರೋಧಿಸಿದೆ.

ಅಲ್ಲದೆ, ಜಿಲ್ಲಾಧಿಕಾರಿಗಳ ಕ್ರಮ “ಸಂವಿಧಾನ ವಿರೋಧಿ ಹಾಗೂ ಕಾನೂನು ಬಾಹಿರ’ ಎಂದು ಆಕ್ರೋಶ ವ್ಯಕ್ತಪಡಿಸಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಹಾ ಒಕ್ಕೂಟದ ಅಧ್ಯಕ್ಷ ಲೋಲಾಕ್ಷ ಅವರು, ‘ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ “ಮೇರಾ” ಮತ್ತು “ಮಾನ್ಸಾ’ ಜಾತಿ ಎರಡರಲ್ಲಿ ಗೊಂದಲವಿದೆ. ಈ ಜಾತಿಯನ್ನು ಆದಿದ್ರಾವಿಡ ಪಟ್ಟಿಯಲ್ಲಿ ಸೇರಿಸಲು ಅವಕಾಶ ಕಲ್ಪಿಸಲಾಗಿದೆ. ಈ ಬಗ್ಗೆ ಸರಕಾರಕ್ಕೆ ವರದಿ ಕಳುಹಿಸಲಾಗಿದೆ’ ಎಂದು ಒಳಮೀಸಲಾತಿ ಸಮೀಕ್ಷೆ ಕುರಿತು ಸುದ್ಧಿಗೋಷ್ಠಿಯಲ್ಲಿ ಉಡುಪಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ತಿಳಿಸಿದ್ದಾರೆ. ಇನ್ನು ಈ ಸುದ್ದಿಗೋಷ್ಠಿಯಲ್ಲಿ ಮಹಾಒಕ್ಕೂಟದ ಪ್ರಧಾನ ಕಾರ್ಯದರ್ಶಿ ಕಾಂತಪ್ಪ ಅಲಂಗಾರ್, ಮೊಗೇರ ಸಂಘದ ಅಧ್ಯಕ್ಷ ಸೀತಾರಾಮ್ ಕೊಂಚಾಡಿ, ರಾಜ್ಯ ಆದಿದ್ರಾವಿಡ ಸಮಾಜದ ರಾಜ್ಯ ಅಧ್ಯಕ್ಷ ಗಣೇಶ್ ಪ್ರಸಾದ್, ರಾಜ್ಯ ಮುಖಂಡ ಅನಿಲ್ ಕಂಕನಾಡಿ, ಉಡುಪಿಯ ಮುಂಡಾಲ ಸಮಾಜದ ಮುಖಂಡ ಬಿ ಕೆ ರಾಜು ಮತ್ತಿತರರು ಉಪಸ್ಥಿತರಿದ್ರು.



