ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಚತ್ರು ಪ್ರದೇಶದ ಸಿಂಗ್ಪೋರಾದಲ್ಲಿ ಇಂದು ಬೆಳಿಗ್ಗೆ ಉಗ್ರರ ಚಳಿ ಬಿಡಿಸುವ ಕಾರ್ಯ ನಡೆದಿದೆ. ಭದ್ರತಾ ಪಡೆ ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದೆ.
ವರದಿಗಳ ಪ್ರಕಾರ, ಭದ್ರತಾ ಪಡೆಗಳು ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆಯ 3 – 4 ಭಯೋತ್ಪಾದಕರನ್ನು ಸುತ್ತುವರೆದಿವೆ. ಉಗ್ರರ ವಿರುದ್ಧದ ಈ ಕಾರ್ಯಾಚರಣೆ ಇನ್ನೂ ನಡೆಯುತ್ತಿದ್ದು, ಜಮ್ಮು ಮತ್ತು ಕಾಶ್ಮೀರ ಪೊಲೀಸರಿಂದ ಭದ್ರತಾ ಪಡೆಗಳಿಗೆ ದೊರೆತ ನಿಖರವಾದ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ.
ಜಮ್ಮು ಮತ್ತು ಕಾಶ್ಮೀರ ಪೊಲೀಸ್, ಸೇನೆ ಮತ್ತು ಅರೆಸೈನಿಕ ಪಡೆಗಳ ಜಂಟಿ ತಂಡವು ಈ ಪ್ರದೇಶದಲ್ಲಿ ಶೋಧ ಮತ್ತು ಸುತ್ತುವರಿದ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಈ ವೇಳೆ ಭಯೋತ್ಪಾದಕರು ಮತ್ತು ಭದ್ರತಾ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆದಿದೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…