ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಯೊಳಗೆ ನುಗ್ಗಿ ಲಕ್ಷಾಂತರ ರೂ.ಮೌಲ್ಯದ ಚಿನ್ನವನ್ನು ಕಳವು ಮಾಡಿದ ಪ್ರಕರಣಕ್ಕೆ ಸಂಬ0ಧಿಸಿದAತೆ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೋಲಿಸ್ ಇನ್ಸ್ ಪೆಕ್ಟರ್ ಶಿವಕುಮಾರ್ ನೇತೃತ್ವದ ತಂಡ ಬಂಧಿಸಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಮೇ. 19ರಂದು ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ತುಂಬೆ ಗ್ರಾಮದ ಹಾಮದ್ ಹಾಜಿರಸ್ತೆಯ ಪರ್ಲಬೈಲು ನಿವಾಸಿ ಮಜೀದ್ ಎಂಬವರ ಮನೆಯಲ್ಲಿ ಸುಮಾರು 1,49,000 ಸಾವಿರ ಮೌಲ್ಯದ 28 ಗ್ರಾಂ ತೂಕದ ಚಿನ್ನದ ನೆಕ್ಲೆಸ್ ಕಳವು ನಡೆದಿತ್ತು. ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಯ ಮಹಡಿಯ ಹಂಚನ್ನು ಸರಿಸಿ ಒಳಪ್ರವೇಶಿಸಿ ಮನೆಯ ಕಪಾಟಿನಲ್ಲಿ ಇಟ್ಟಿದ್ದ ಚಿನ್ನವನ್ನು ಕಳವು ಮಾಡಿದ್ದಾರೆ.
ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಬಂಟ್ವಾಳ ಗ್ರಾಮಾಂತರ ಠಾಣೆಯ ಪೋಲೀಸರು ಆರೋಪಿ ತುಂಬೆ ನಿವಾಸಿ ಹಸನ್ ಬಾವ ಎಂಬಾತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್‌ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…