ಉಡುಪಿ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಮೀನುಗಾರರಿಗೆ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ.
ಆಳಸಮುದ್ರಕ್ಕೆ ಹೋಗಿದ್ದ ಭಾರಿ ಗಾತ್ರದ ಬೊಟುಗಳು ಸಾಲು ಸಾಲಾಗಿ ವಾಪಸು ಬರುತ್ತಿವೆ. ಕೆಲವು ಬೋಟುಗಳು ಸಮೀಪದ ಬಂದರುಗಳಲ್ಲೇ ಲಂಗರು ಹಾಕಿವೆ. ಮೇ ತಿಂಗಳ ಅಂತ್ಯದವರೆಗೂ ಮೀನುಗಾರಿಕೆಗೆ ಅವಕಾಶವಿತ್ತು. ಆದರೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿದೆ. ಜೋರಾಗಿ ಬೀಸುತ್ತಿರುವ ಬಿರುಗಾಳಿಯಿಂದಾಗಿ ಕಡಲು ಪ್ರಕ್ಷುಬ್ದಗೊಂಡಿದ್ದು, ಅಲೆಗಳ ಆರ್ಭಟ ಕೂಡ ಜೋರಾಗಿದೆ. ಹೀಗಾಗಿ ಅವಧಿಗೂ ಮುನ್ನ ಮೀನುಗಾರಿಕಾ ಋತು ದುರಂತ ಅಂತ್ಯ ಕಂಡಿದೆ. ಸಂಪೂರ್ಣ ನಷ್ಟದಲ್ಲಿ ಮೀನುಗಾರಿಕಾ ಋತು ಮುಗಿದಿದೆ. ವರ್ಷವಿಡೀ ಮೀನು ದೊರಕದೆ ಕಂಗಲಾಗಿದ್ದ ಮೀನುಗಾರರಿಗೆ ಅವಧಿಗೂ ಮೊದಲು ಬಂದ ಮಳೆ ಮತ್ತಷ್ಟು ಪೆಟ್ಟು ನೀಡಿದೆ.
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…