ದೆಹಲಿಯ ಎನ್‌ಎಸ್‌ಡಿ ವಿದ್ಯಾರ್ಥಿಗಳಿಗೆ ಗುರು ಬನ್ನಂಜೆ ಸಂಜೀವ ಸುವರ್ಣರಿಂದ ಯಕ್ಷಗಾನ ತರಬೇತಿ ಶಿಬಿರ ಆರಂಭವಾಗಿದೆ.

ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ತಿಂಗಳೆಯಲ್ಲಿ ತಿಂಗಳೆ ಪ್ರತಿಷ್ಠಾನದ ಸಹಯೋಗದೊಂದಿಗೆ ಈ 11 ದಿನಗಳ ಶಿಬಿರ ನಡೆಯಲಿದೆ. ಶಿಬಿರಕ್ಕೆ ಉದ್ಯಮಿ ಕೊಲ್ಲಬೆಟ್ಟು ರವೀಂದ್ರ ಶೆಟ್ಟಿ ಚಾಲನೆ ನೀಡಿದ್ರು. ಗುರು ಸಂಜೀವ ಸುವರ್ಣ ಅವರಲ್ಲಿ ಯಕ್ಷಗಾನ ತರಬೇತಿ ಪಡೆಯುವುದೇ ಪೂರ್ವ ಜನ್ಮದ ಸುಕೃತ ಎಂದು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದ್ರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಗುರು ಬನ್ನಂಜೆ ಸಂಜೀವ ಸುವರ್ಣ ಮಾತನಾಡಿ, ಕಲಿಯುವ ತುಡಿತ ಸಾಧನೆಯ ಛಲ ಇವೆರಡು ಇದ್ದರೆ ಸಾಕು ಯಾವ ಕಲೆಯನ್ನು ಸುಲಲಿತವಾಗಿ ಅಭ್ಯಾಸ ಮಾಡಬಹುದು ಎಂದಿದ್ದಾರೆ. ಇನ್ನು ಈ ಸಂದರ್ಭದಲ್ಲಿ ತಿಂಗಳೆ ಪ್ರತಿಷ್ಠಾನದ ಮುಖ್ಯಸ್ಥರಾದ ತಿಂಗಳೆ ವಿಕ್ರಮಾರ್ಜುನ ಹೆಗ್ಗಡೆ, ಎನ್ ಎಸ್ ಡಿ ದೆಹಲಿ ಇದರ ಮುಖ್ಯಸ್ಥರಾದ ಪ್ರೊ.ವಿವೇಕ್, ಭಾಗವತರಾದ ಲಂಬೋಧರ ಹೆಗಡೆ, ಶ್ರೀಧರ ಹೆಗಡೆ ಉಪಸ್ಥಿತರಿದ್ರು.



