ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು: ಜಿ. ಪರಮೆಶ್ವರ್ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿ ಹಿನ್ನೆಲೆ; ಸಿಎಂ ಭೇಟಿಯಾದ ಗೃಹ ಸಚಿವ

ತಮ್ಮ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿ ನಡೆಯುತ್ತಿರುವ ನಡುವೆಯೇ ಗೃಹ ಸಚಿವ ಜಿ ಪರಮೇಶ್ವರ ಅವರು ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ನಿಖರವಾದ ವಿವರಗಳು ತಿಳಿದಿಲ್ಲ. ಆದರೆ, ಕಾಂಗ್ರೆಸ್ ಮೂಲಗಳು ಹೇಳುವಂತೆ ಪರಮೇಶ್ವರ ಅವರು ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂಗೆ ದಾಳಿಯ ಬಗ್ಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಚಿನ್ನದ ಕಳ್ಳಸಾಗಣೆ ದಂಧೆ ಸೇರಿದಂತೆ ಅಕ್ರಮ ಹಣಕಾಸು ವಹಿವಾಟು ಬಗ್ಗೆ ಇಡಿ ತನಿಖೆ ನಡೆಸುತ್ತಿದೆ.

ಚಿನ್ನ ಕಳ್ಳ ಸಾಗಣೆ ಆರೋಪಿ, ನಟಿ ರನ್ಯಾರಾವ್ ಖಾತೆಗೆ ಹವಾಲಾ ಹಣ ವರ್ಗಾವಣೆ ಮಾಡಿದವರನ್ನು ಗುರಿಯಾಗಿಸಿಕೊಂಡು ED ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ರಾಜ್ಯದ 16 ಸ್ಥಳಗಳಲ್ಲಿ ದಾಳಿ ನಡೆಸಿದೆ. ಇದರಲ್ಲಿ ಪರಮೇಶ್ವರ ಅವರಿಗೆ ಸಂಬಂಧಿಸಿದ ಮೂರು ಶಿಕ್ಷಣ ಸಂಸ್ಥೆಗಳೂ ಸೇರಿವೆ.

ಸಿದ್ಧಾರ್ಥ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಸಿದ್ಧಾರ್ಥ ವೈದ್ಯಕೀಯ ಕಾಲೇಜು ಸೇರಿದಂತೆ ಮೂರು ಸಂಸ್ಥೆಗಳು ಮತ್ತು ವಿಶ್ವವಿದ್ಯಾನಿಲಯಕ್ಕೆ ED ಅಧಿಕಾರಿಗಳು ಭೇಟಿ ನೀಡಿ ಕಳೆದ ಐದು ವರ್ಷಗಳ ಆರ್ಥಿಕ ದಾಖಲೆಗಳನ್ನು ಕೋರಿದ್ದಾರೆ ಎಂದು ಪರಮೇಶ್ವರ ಹೇಳಿದ್ದಾರೆ.

ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಸತೀಶ್ ಜಾರಕಿಹೊಳಿ, ದಿನೇಶ್ ಗುಂಡೂರಾವ್ ಸೇರಿದಂತೆ ಹಲವು ಸಚಿವರು ಮತ್ತು ಆಡಳಿತ ಪಕ್ಷದ ಶಾಸಕರು ದಾಳಿಯ ನಂತರ ಪರಮೇಶ್ವರ ಅವರ ಸದಾಶಿವನಗರ ನಿವಾಸಕ್ಕೆ ಭೇಟಿ ನೀಡಿ ಬೆಂಬಲ ವ್ಯಕ್ತಪಡಿಸಿದರು.

ಕಾಂಗ್ರೆಸ್ ನಾಯಕರನ್ನೇ ಗುರಿಯಾಗಿಸಿಕೊಳ್ಳುತ್ತಿದ್ದೀರೇಕೆ? BJP ನಾಯಕರೆಲ್ಲೂ ಪ್ರಾಮಾಣಿಕರೇ? ED’ಗೆ ಸಿದ್ದರಾಮಯ್ಯ ಪ್ರಶ್ನೆಯನ್ನು ಮಾಡಿದ್ದಾರೆ. “ನಾವೆಲ್ಲರೂ ಸಾರ್ವಜನಿಕ ಜೀವನದಲ್ಲಿ ಇದ್ದೇವೆ. ಅನೇಕ ಜನರು ಟ್ರಸ್ಟ್‌ಗಳನ್ನು ನಡೆಸುತ್ತಿದ್ದು, ಅವರು ಮದುವೆಗೆ ಹಣವನ್ನು ಉಡುಗೊರೆಯಾಗಿ ನೀಡಿರಬಹುದು. ಪರಮೇಶ್ವರ ಅವರಂತಹ ಪ್ರಭಾವಿ ನಾಯಕ ಕಳ್ಳಸಾಗಣೆಯಲ್ಲಿ ತೊಡಗಬಹುದೇ?” ಎಂದು ಶಿವಕುಮಾರ್ ಪ್ರಶ್ನಿಸಿದರು.

ರನ್ಯಾ ರಾವ್ ಅವರನ್ನು ಮಾರ್ಚ್ 3 ರಂದು ದುಬೈನಿಂದ ಬಂದ ನಂತರ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿತ್ತು. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಡಿಆರ್‌ಐ ಅಧಿಕಾರಿಗಳು ಆಕೆಯನ್ನು ವಶಕ್ಕೆ ಪಡೆದು 14.2 ಕೆಜಿ ತೂಕದ 12.56 ಕೋಟಿ ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆದಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!