ತಮ್ಮ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿ ನಡೆಯುತ್ತಿರುವ ನಡುವೆಯೇ ಗೃಹ ಸಚಿವ ಜಿ ಪರಮೇಶ್ವರ ಅವರು ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ನಿಖರವಾದ ವಿವರಗಳು ತಿಳಿದಿಲ್ಲ. ಆದರೆ, ಕಾಂಗ್ರೆಸ್ ಮೂಲಗಳು ಹೇಳುವಂತೆ ಪರಮೇಶ್ವರ ಅವರು ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂಗೆ ದಾಳಿಯ ಬಗ್ಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಚಿನ್ನದ ಕಳ್ಳಸಾಗಣೆ ದಂಧೆ ಸೇರಿದಂತೆ ಅಕ್ರಮ ಹಣಕಾಸು ವಹಿವಾಟು ಬಗ್ಗೆ ಇಡಿ ತನಿಖೆ ನಡೆಸುತ್ತಿದೆ.
ಚಿನ್ನ ಕಳ್ಳ ಸಾಗಣೆ ಆರೋಪಿ, ನಟಿ ರನ್ಯಾರಾವ್ ಖಾತೆಗೆ ಹವಾಲಾ ಹಣ ವರ್ಗಾವಣೆ ಮಾಡಿದವರನ್ನು ಗುರಿಯಾಗಿಸಿಕೊಂಡು ED ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ರಾಜ್ಯದ 16 ಸ್ಥಳಗಳಲ್ಲಿ ದಾಳಿ ನಡೆಸಿದೆ. ಇದರಲ್ಲಿ ಪರಮೇಶ್ವರ ಅವರಿಗೆ ಸಂಬಂಧಿಸಿದ ಮೂರು ಶಿಕ್ಷಣ ಸಂಸ್ಥೆಗಳೂ ಸೇರಿವೆ.
ಸಿದ್ಧಾರ್ಥ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಸಿದ್ಧಾರ್ಥ ವೈದ್ಯಕೀಯ ಕಾಲೇಜು ಸೇರಿದಂತೆ ಮೂರು ಸಂಸ್ಥೆಗಳು ಮತ್ತು ವಿಶ್ವವಿದ್ಯಾನಿಲಯಕ್ಕೆ ED ಅಧಿಕಾರಿಗಳು ಭೇಟಿ ನೀಡಿ ಕಳೆದ ಐದು ವರ್ಷಗಳ ಆರ್ಥಿಕ ದಾಖಲೆಗಳನ್ನು ಕೋರಿದ್ದಾರೆ ಎಂದು ಪರಮೇಶ್ವರ ಹೇಳಿದ್ದಾರೆ.
ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಸತೀಶ್ ಜಾರಕಿಹೊಳಿ, ದಿನೇಶ್ ಗುಂಡೂರಾವ್ ಸೇರಿದಂತೆ ಹಲವು ಸಚಿವರು ಮತ್ತು ಆಡಳಿತ ಪಕ್ಷದ ಶಾಸಕರು ದಾಳಿಯ ನಂತರ ಪರಮೇಶ್ವರ ಅವರ ಸದಾಶಿವನಗರ ನಿವಾಸಕ್ಕೆ ಭೇಟಿ ನೀಡಿ ಬೆಂಬಲ ವ್ಯಕ್ತಪಡಿಸಿದರು.
ಕಾಂಗ್ರೆಸ್ ನಾಯಕರನ್ನೇ ಗುರಿಯಾಗಿಸಿಕೊಳ್ಳುತ್ತಿದ್ದೀರೇಕೆ? BJP ನಾಯಕರೆಲ್ಲೂ ಪ್ರಾಮಾಣಿಕರೇ? ED’ಗೆ ಸಿದ್ದರಾಮಯ್ಯ ಪ್ರಶ್ನೆಯನ್ನು ಮಾಡಿದ್ದಾರೆ. “ನಾವೆಲ್ಲರೂ ಸಾರ್ವಜನಿಕ ಜೀವನದಲ್ಲಿ ಇದ್ದೇವೆ. ಅನೇಕ ಜನರು ಟ್ರಸ್ಟ್‌ಗಳನ್ನು ನಡೆಸುತ್ತಿದ್ದು, ಅವರು ಮದುವೆಗೆ ಹಣವನ್ನು ಉಡುಗೊರೆಯಾಗಿ ನೀಡಿರಬಹುದು. ಪರಮೇಶ್ವರ ಅವರಂತಹ ಪ್ರಭಾವಿ ನಾಯಕ ಕಳ್ಳಸಾಗಣೆಯಲ್ಲಿ ತೊಡಗಬಹುದೇ?” ಎಂದು ಶಿವಕುಮಾರ್ ಪ್ರಶ್ನಿಸಿದರು.
ರನ್ಯಾ ರಾವ್ ಅವರನ್ನು ಮಾರ್ಚ್ 3 ರಂದು ದುಬೈನಿಂದ ಬಂದ ನಂತರ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿತ್ತು. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಡಿಆರ್‌ಐ ಅಧಿಕಾರಿಗಳು ಆಕೆಯನ್ನು ವಶಕ್ಕೆ ಪಡೆದು 14.2 ಕೆಜಿ ತೂಕದ 12.56 ಕೋಟಿ ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆದಿದ್ದರು.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್‌ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್‌ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್‌ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…