ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ನಾಮಕರಣ ಮಾಡಲು ತೀರ್ಮಾನ ಮಾಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಸಚಿವ ಸಂಪುಟ ಸಭೆ ಬಳಿಕ ಮಾತನಾಡಿರುವ ಡಿ.ಕೆ.ಶಿವಕುಮಾರ್, ಇವತ್ತಿನ ಸಭೆಯಲ್ಲಿ ರಾಮನಗರ ಜಿಲ್ಲೆಯ ಹೆಸರು ಬದಲಾಯಿಸುವ ಬಗ್ಗೆ ನಿರ್ಧಾರ ಮಾಡಲಾಗಿದೆ. ಅಧಿಕೃತವಾಗಿ ಈ ಸಂಬಂಧ ಆದೇಶ ಹೊರ ಬೀಳಲಿದೆ. ಇನ್ಮುಂದೆ ರಾಮನಗರ ಹೆಡ್ ಕ್ವಾಟ್ರಸ್ ಆಗಿರಲಿದೆ ಎಂದು ತಿಳಿಸಿದ್ದಾರೆ.
ಕರ್ನಾಟಕ ಸರ್ಕಾರವು ರಾಮನಗರ ಜಿಲ್ಲೆಯನ್ನು ‘ಬೆಂಗಳೂರು ದಕ್ಷಿಣ’ ಎಂದು ನಾಮಕರಣ ಮಾಡುವ ನಿರ್ಧಾರವನ್ನು ಜುಲೈ, 2024ರಲ್ಲೂ ತೆಗೆದುಕೊಂಡಿತ್ತು. ಈ ನಾಮಕರಣವು ‘ಬ್ರ್ಯಾಂಡ್ ಬೆಂಗಳೂರು’ ಹೆಸರಿನ ಮೂಲಕ ಜಿಲ್ಲೆಗೆ ಅಭಿವೃದ್ಧಿ ಮತ್ತು ಹೂಡಿಕೆ ಆಕರ್ಷಿಸಲು ಉದ್ದೇಶಿತವಾಗಿದೆ.
ಯಾವುದೇ ಜಿಲ್ಲೆಯ ಹೆಸರನ್ನು ಬದಲಾವಣೆ ಮಾಡಲು ಕೇಂದ್ರ ಗೃಹ ಸಚಿವಾಲಯದ ಒಪ್ಪಿಗೆ ಬೇಕಾಗಿತ್ತು. ಅಂತೆಯೇ ಕಳೆದ ಬಾರಿ ಕರ್ನಾಟಕ ಸರ್ಕಾರದ ತೀರ್ಮಾನವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿತ್ತು. ಹೀಗಾಗಿ ಈ ಬಾರಿಯ ಪ್ರಸ್ತಾಪ ಏನಾಗಲಿದೆ ಅನ್ನೋದು ತೀವ್ರ ಕುತೂಹಲ ಮೂಡಿದೆ. ಕೇಂದ್ರ ಸಚಿವ ಸಂಪುಟದಲ್ಲಿ ಜೆಡಿಎಸ್ ನಾಯಕ ಹೆಚ್ಡಿ ಕುಮಾರಸ್ವಾಮಿ ಇದ್ದಾರೆ. ಕುಮಾರಸ್ವಾಮಿ ಅವರು ಮೊದಲನಿಂದಲೂ ರಾಮನಗರ ಜಿಲ್ಲೆಯ ಹೆಸರು ಬದಲಾವಣೆಗೆ ವಿರೋಧಿಸುತ್ತ ಬಂದಿದ್ದಾರೆ.
ಈ ಬಗ್ಗೆ ಮಾತನಾಡಿದ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ರಾಮನಗರ ಹೆಸರು ಬದಲಾವಣೆಯ ಅಧಿಸೂಚನೆ ಇವತ್ತು ಆಗುತ್ತೆ. ಹೆಸರು ಬದಲಾವಣೆ ಮಾಡಲು ಯಾವುದೇ ಹಣ ಖರ್ಚಾಗೋದಿಲ್ಲ. ರಾಮನಗರ ಮೊದಲು ಬೆಂಗಳೂರು ಜಿಲ್ಲೆಗೆ ಸೇರಿತ್ತು. ಕನಕಪುರ, ಚನ್ನಪಟ್ಟಣ ಬೆಂಗಳೂರು ಜಿಲ್ಲೆಗೆ ಸೇರಿತ್ತು. ಹಿಂದೆ ನಾನು ಕೂಡ ಬೆಂಗಳೂರು ಜಿಲ್ಲೆಯ ಜಿಲ್ಲಾ ಪಂಚಾಯತ್ ಸದಸ್ಯನಾಗಿದ್ದೆ. ಬೆಂಗಳೂರು ಹೆಸರು ಉಳಿಸಬೇಕಿತ್ತು. ಅದಕ್ಕಾಗಿ ಹೆಸರು ಬದಲಾವಣೆ ಮಾಡಿದ್ದೇವೆ ಎಂದರು.
ನನ್ನನ್ನ ಕೂಡ ನೀವು ಬೆಂಗಳೂರು ದಕ್ಷಿಣ ಜಿಲ್ಲೆಯವರು ಅಂತ ಕರೆಯಬೇಕು. ಹೆಸರು ಬದಲಾವಣೆಗೆ ಕೇಂದ್ರಕ್ಕೆ ಯಾವುದೇ ಅಧಿಕಾರ ಇರಲಿಲ್ಲ. ಕೇಂದ್ರದ ಗಮನಕ್ಕೆ ತರಬೇಕಿತ್ತು, ಹಾಗಾಗಿ ಹೆಸರನ್ನ ಕಳುಹಿಸಿಕೊಟ್ಟಿದ್ದೆವು ಅಷ್ಟೇ. ವಿಶ್ವದಲ್ಲೇ ಬೆಂಗಳೂರು ದಕ್ಷಿಣ ದೊಡ್ಡದಾಗಿ ಬೆಳೆಯುತ್ತಿದೆ. ಕಾನೂನು ಚೌಕಟ್ಟನ್ನು ಗಮನದಲ್ಲಿಟ್ಟುಕೊಂಡು ಹೆಸರು ಬದಲಾವಣೆ ಮಾಡಿದ್ದೇವೆ. ಕ್ಷೇತ್ರದಲ್ಲಿ ಯಾವುದೇ ಬದಲಾವಣೆ ಇರೋದಿಲ್ಲ. ಈಗ ಹೇಗಿದೆಯೋ ಹಾಗೆಯೇ ಇರಲಿದೆ ಎಂದು ತಿಳಿಸಿದ್ದಾರೆ.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್‌ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್‌ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್‌ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…