‘ಅಮೃತ ಭಾರತ’ ಯೋಜನೆಯಡಿ ₹1,100 ಕೋಟಿ ವೆಚ್ಚದಲ್ಲಿ ನವೀಕರಿಸಿದ 103 ರೈಲು ನಿಲ್ದಾಣಗಳ ಉದ್ಘಾಟನೆಯನ್ನು ಪ್ರಧಾನಿ ನರೇಂದ್ರ ಮೋದಿ ಇಂದು ವಿಡಿಯೊ ಕಾನ್ಸ್‌ರೆನ್ಸ್ ಮೂಲಕ ನೆರವೇರಿಸಿದ್ದಾರೆ.
ಈ ಸಂದರ್ಭದಲ್ಲಿ ಪ್ರತಿಕ್ರಿಯಿಸಿದ ಪ್ರಧಾನಿ ಮೋದಿ, ‘ದೇಶವು ತನ್ನ ರೈಲು ಜಾಲ ಮತ್ತು ಮೂಲಸೌಕರ್ಯವನ್ನು ಆಧುನೀಕರಿಸುತ್ತಿದೆ. ಇದು ದೇಶದ ವೇಗ ಮತ್ತು ಪ್ರಗತಿಯನ್ನು ಬಿಂಬಿಸುತ್ತದೆ’ ಎಂದು ಹೇಳಿದ್ದಾರೆ.
₹1.100 ಕೋಟಿಗೂ ಹೆಚ್ಚು ವೆಚ್ಚದಲ್ಲಿ 18 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳನ್ನು ಒಳಗೊಂಡ 86 ಜಿಲ್ಲೆಗಳಲ್ಲಿ ಒಟ್ಟು 103 ನವೀಕರಿಸಿದ ಅಮೃತ ಭಾರತ ರೈಲು ನಿಲ್ದಾಣಗಳನ್ನು ಪ್ರಧಾನಿ ಮೋದಿ ದೇಶಕ್ಕೆ ಸಮರ್ಪಿಸಿದ್ದಾರೆ. ನವೀಕರಿಸಿದ ರೈಲ್ವೆ ನಿಲ್ದಾಣಗಳು ಅತ್ಯಾಧುನಿಕ ಸೌಲಭ್ಯಗಳನ್ನು ಒಳಗೊಂಡಿರಲಿವೆ. ‘ನವೀಕರಣಗೊಂಡ ಈ ರೈಲು ನಿಲ್ದಾಣಗಳು ಅಮೃತ ಭಾರತ ನಿಲ್ದಾಣಗಳೆಂದು ಗುರುತಿಸಲಿವೆ. 100ಕ್ಕೂ ಹೆಚ್ಚು ಅಮೃತ ಭಾರತ ನಿಲ್ದಾಣಗಳ ನವೀಕರಣ ಪೂರ್ಣಗೊಂಡಿವೆ. ಹಿಂದಿನ ಪರಿಸ್ಥಿತಿ ಹೇಗಿತ್ತು ಮತ್ತು ಈಗಿನ ಪರಿಸ್ಥಿತಿ ಹೇಗಿದೆ ಎಂಬುದರ ಕುರಿತು ಜನರು ಸಾಮಾಜಿಕ ಮಾಧ್ಯಗಳಲ್ಲಿ ಹಂಚುತ್ತಿದ್ದಾರೆ’ ಎಂದು ಪ್ರಧಾನಿ ಮೋದಿ ಉಲ್ಲೇಖಿಸಿದ್ದಾರೆ.
‘ಈ ಅಮೃತ ಭಾರತ ಕೇಂದ್ರಗಳಲ್ಲಿ ಅಭಿವೃದ್ಧಿ ಹಾಗೂ ಪರಂಪರೆ ಸ್ಪಷ್ಟವಾಗಿ ಎದ್ದು ಕಾಣಿಸುತ್ತಿದೆ. ಅವುಗಳು ಸ್ಥಳೀಯ ಕಲೆ ಹಾಗೂ ಸಂಸ್ಕೃತಿಯ ಪ್ರತೀಕವಾಗಿವೆ. ಪ್ರತಿಯೊಂದು ಅಮೃತ ಭಾರತ ನಿಲ್ದಾಣದಲ್ಲಿ ದೇಶದ ಸಾವಿರಾರು ವರ್ಷಗಳ ಹಳೆಯ ಪರಂಪರೆಯನ್ನು ಕಾಣಬಹುದಾಗಿದೆ’ ಎಂದು ಹೇಳಿದ್ದಾರೆ.
‘ಅಮೃತ ಭಾರತ’ ಈ ಮೂಲಕ ಪ್ರವಾಸೋದ್ಯಮಕ್ಕೆ ಉತ್ತೇಜನ ಸಿಗಲಿದ್ದು, ಹೊಸ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ’ ಎಂದಿದ್ದಾರೆ.
ಅಮೃತ ಭಾರತ ಯೋಜನೆ ಅಡಿಯಲ್ಲಿ 1,300ಕ್ಕೂ ಹೆಚ್ಚು ನಿಲ್ದಾಣಗಳನ್ನು ನವೀಕರಿಸಲಾಗುತ್ತಿದೆ.
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…
ಪುತ್ತೂರಿನ ಪ್ರಕರಣ ಹಾಗೂ ಕಾರ್ಕಳದ ಅಭಿಷೇಕ್ ಆಚಾರ್ಯ ಅವರ ಆತ್ಮಹತ್ಯೆಗೆ ಸಂಬಂಧಿಸಿದ ವಿಷಯವಾಗಿ ಮಾನ್ಯ ಗ್ರಹಸಚಿವರಾದ ಶ್ರೀ ಜಿ ಪರಮೇಶ್ವರ್…